1. ಎಂ.ಕೆ. ಹುಬ್ಬಳ್ಳಿಯಲ್ಲಿ ಮುಂದುವರಿದ ಬೃಹತ್ ಪ್ರತಿಭಟನೆ
2. ಸ್ಥಳಕ್ಕೆ ಜಿಲ್ಲಾಧಿಕಾರಿಗಳೇ ಬರುವಂತೆ ಆಗ್ರಹ
3. ಅಧಿಕಾರಿಗಳ ಮನವೊಲಿಕೆ ಕಸರತ್ತು ಸಕ್ಸಸ್ ಆಗಿಲ್ಲ
4. ವಿವಿಧ ಸಂಘಟನೆಗಳಿಂದ ಹೋರಾಟಕ್ಕೆ ಭಾರಿ ಬೆಂಬಲ

ಎಂ.ಕೆ. ಹುಬ್ಬಳ್ಳಿಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಮ್ಮಿಕೊಂಡಿರುವ ಪ್ರತಿಭಟನೆ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆಯ ಉನ್ನತ ಅಧಿಕಾರಿಗಳು ಭೇಟಿ ನೀಡಿದ್ದರೂ, ಹೋರಾಟಗಾರರು ಮಾತ್ರ ಜಿಲ್ಲಾಧಿಕಾರಿಗಳೇ ಬರಬೇಕೆಂದು ಪಟ್ಟು ಹಿಡಿದಿದ್ದಾರೆ.
ಬೆಳಗಾವಿ ಜಿಲ್ಲೆಯ ಎಂ.ಕೆ. ಹುಬ್ಬಳ್ಳಿಯಲ್ಲಿ ವಿವಿಧ ನ್ಯಾಯಯುತ ಬೇಡಿಕೆಗಳಿಗಾಗಿ ಆಗ್ರಹಿಸಿ ಹಮ್ಮಿಕೊಂಡಿರುವ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ಎರಡನೇ ದಿನವೂ ಮುಂದುವರಿದಿದೆ. ಪ್ರತಿಭಟನಾ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕರಾದ ರಮಣಗೌಡ ಕನ್ನೊಳ್ಳಿ ಹಾಗೂ ಸಹಾಯಕ ನಿರ್ದೇಶಕ ಉಳ್ಳಾಗಡ್ಡಿ ಅವರು ಭೇಟಿ ನೀಡಿ, ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಅಧಿಕಾರಿಗಳು ಮನವಿಯನ್ನು ಸ್ವೀಕರಿಸಿ ಮೇಲಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದರೂ, ಪ್ರತಿಭಟನಾಕಾರರು ಮಾತ್ರ ಸ್ಥಳಕ್ಕೆ ಜಿಲ್ಲಾಧಿಕಾರಿಗಳೇ ಆಗಮಿಸಬೇಕು ಎಂದು ಪಟ್ಟು ಹಿಡಿದು ಹೋರಾಟವನ್ನು ಮುಂದುವರಿಸಿದ್ದಾರೆ.
ಈ ಸಂದರ್ಭದಲ್ಲಿ ಮಲ್ಲೇಶ್ ಚೌಗಲೇ, ವಿಠ್ಠಲ ಸಗರಮ್ಮನವರ, ರಾಜಶೇಖರ ಹಿಂಡಲಗಿ ಸೇರಿದಂತೆ ಪ್ರಮುಖ ಮುಖಂಡರು ಮಾತನಾಡಿ, ಸಮಸ್ಯೆಗಳ ಪರಿಹಾರಕ್ಕೆ ತಕ್ಷಣದ ಕ್ರಮ ಅನಿವಾರ್ಯ ಎಂದು ಒತ್ತಾಯಿಸಿದರು. ಹೋರಾಟದಲ್ಲಿ ರಾಘವೇಂದ್ರ ಚಲವಾದಿ, ರಾಯಪ್ಪ ಚಲವಾದಿ, ಉಮೇಶ್ ಕೋಲಕಾರ, ಸಂದೀಪ್ ಚಲವಾದಿ, ಅದೃಶ್ಯ ಹಿಂಡಲಗಿ, ಪ್ರವೀಣ್ ಮಾದರ, ರಾಜಶೇಖರ ಚಲವಾದಿ, ಪರಶುರಾಮ ವಂತಮೂರಿ, ಮನೋಹರ ಚಲವಾದಿ, ಕಾರ್ತಿಕ್ ತಳವಾರ ಹಾಗೂ ಜೈ ಭೀಮ ಯುವಕ ಮಂಡಲದ ಸದಸ್ಯರು ಮತ್ತು ವಿವಿಧ ಸಂಘಟನೆಗಳ ನೂರಾರು ಕಾರ್ಯಕರ್ತರು ಭಾಗವಹಿಸಿ ಆಕ್ರೋಶ ವ್ಯಕ್ತಪಡಿಸಿದರು.
