M K HUBLI

ಎಂ.ಕೆ. ಹುಬ್ಬಳ್ಳಿಯಲ್ಲಿ ಅಹೋರಾತ್ರಿ ಧರಣಿ: ಪಟ್ಟಣದ ಸಮಗ್ರ ಅಭಿವೃದ್ಧಿ ಹಾಗೂ ಅತಿಕ್ರಮಣ ತೆರವಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Share

ಬೆಳಗಾವಿ ಜಿಲ್ಲೆಯ ಎಂ.ಕೆ. ಹುಬ್ಬಳ್ಳಿ ಪಟ್ಟಣ ಪಂಚಾಯತಿ ಆವರಣದಲ್ಲಿ ಇಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿನೂತನ ಮಾದರಿಯ ಅಹೋರಾತ್ರಿ ಧರಣಿ ನಡೆಸಲಾಯಿತು. ಪಟ್ಟಣದ ಪ್ರಮುಖ ಸಮಸ್ಯೆಗಳ ಕುರಿತು ಅಧಿಕಾರಿಗಳ ಗಮನ ಸೆಳೆಯಲು ವಿವಿಧ ಸಂಘಟನೆಗಳು ಹಾಗೂ ನಾಗರಿಕರು ಬೀದಿಗಿಳಿದಿದ್ದರು.

ಎಂ.ಕೆ. ಹುಬ್ಬಳ್ಳಿ ಪಟ್ಟಣದ ಡಾ. ಬಾಬು ಜಗಜೀವನರಾಮ ಭವನದ ಜಾಗ ಅತಿಕ್ರಮಣವಾಗಿರುವುದನ್ನು ಖಂಡಿಸಿ ಹಾಗೂ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ಇಂದು ಪಟ್ಟಣ ಪಂಚಾಯತಿ ಆವರಣದಲ್ಲಿ ಅಹೋರಾತ್ರಿ ಧರಣಿ ಪ್ರತಿಭಟನೆ ಜರುಗಿತು. ಮುಖ್ಯವಾಗಿ ಕೆರೆ ಪಕ್ಕದಲ್ಲಿರುವ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಗೆ ಮಳೆಗಾಲದಲ್ಲಿ ಕೆರೆ ನೀರು ನುಗ್ಗಿ ಹಾವುಗಳು ಶಾಲೆಯೊಳಗೆ ಬರುತ್ತಿರುವ ಗಂಭೀರ ಸಮಸ್ಯೆಯನ್ನು ಪ್ರತಿಭಟನಾಕಾರರು ಸರ್ಕಾರದ ಮುಂದಿಟ್ಟರು. ಕೂಡಲೇ ಶಾಲೆಗೆ ರಕ್ಷಣಾತ್ಮಕ ಕಾಂಪೌಂಡ್ ಗೋಡೆ ನಿರ್ಮಿಸಬೇಕು ಮತ್ತು ಪಟ್ಟಣದ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಬೇಕು ಎಂದು ಹೋರಾಟಗಾರರು ಈ ಸಂದರ್ಭದಲ್ಲಿ ಬಲವಾಗಿ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಸ್‌ಸಿಪಿ/ಟಿಎಸ್‌ಪಿ (SCP/TSP) ಅನುದಾನದ ದುರ್ಬಳಕೆಯ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಲಾಯಿತು ಈ ಹೋರಾಟದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಪಟ್ಟಣದ ನೂರಾರು ನಾಗರಿಕರು ಭಾಗವಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. “ನಮ್ಮ ಹೋರಾಟ ನಿರಂತರ” ಎಂಬ ಘೋಷಣೆಯೊಂದಿಗೆ ಪಟ್ಟಣದ ಸರ್ವತೋಮುಖ ಅಭಿವೃದ್ಧಿಯಾಗುವವರೆಗೂ ವಿಶ್ರಮಿಸುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಪಟ್ಟಣದ ನ್ಯಾಯಸಮ್ಮತ ಬೇಡಿಕೆಗಳಿಗೆ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕೆಂದು ಈ ವೇಳೆ ಆಗ್ರಹಿಸಲಾಯಿತು.

ಈ ವೇಳೆ ಜೈ ಭೀಮ ಯುವಕ ಮಂಡಳ ಸೇರಿದಂತೆ ಇನ್ನುಳಿದ ಸಂಘಟನೆಗಳು ಭಾಗಿಯಾಗಿದ್ಧರು.

Tags:

error: Content is protected !!