Dharwad

ನಾಗಾ ಸಾಧುಗಳ ಆರ್ಶೀವಾದ ಪಡೆದು‌ ಧಾರವಾಡ ನೂತನ ಡಿಸಿ ಸ್ನೇಹಲ್ ಆರ್. ಅಧಿಕಾರ ಸ್ವೀಕಾರ….

Share

ಕರ್ನಾಟಕ ಸರಕಾರದ ರಾಷ್ಟ್ರೀಯ ಜೀವನೊಪಾಯ ಅಭಿಯಾನದ ನಿರ್ದೆಶಕರಾಗಿದ್ದ ಮತ್ತು 2017-18 ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಹಿರಿಯ ಐಎಎಸ್ ಅಧಿಕಾರಿ ಸ್ನೇಹಲ್.ಆರ್ ಕಳೆದ ಬುಧವಾರ ಧಾರವಾಡ ಜಿಲ್ಲಾಧಿಕಾರಿಯಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ನಾಗಾ ಸಾಧುಗಳ ಆರ್ಶೀವಾದದೊಂದಿಗೆ ಅಧಿಕಾರ ಸ್ವೀಕರಿಸಿರುವುದು ವಿಶೇಷವಾಗಿತ್ತು.

ವೈ- ಜಿಲ್ಲಾಧಿಕಾರಿಯಾಗಿದ್ದ ದಿವ್ಯ ಪ್ರಭು ಜಿ. ಆರ್. ಜೆ. ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿ, ಆದೇಶಿಸಿರುವ ಹಿನ್ನೆಲೆಯಲ್ಲಿ ಸ್ನೇಹಲ್.ಆರ್. ಧಾರವಾಡ ಜಿಲ್ಲಾಧಿಕಾರಿಯಾಗಿ ಅಧಿಕಾರ ನಿಯೋಜನೆ ಮಾಡಿತ್ತು. ಈ ಹಿನ್ನಲೆಯಲ್ಲಿ ಅಧಿಕಾರ ಸ್ವೀಕಾರಕ್ಕೆ ಬಂದ ನೂತನ ಜಿಲ್ಲಾಧಿಕಾರಿಗಳನ್ನು ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ಭುವನೇಶ ಪಾಟೀಲ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರೀಮಾ ಪವಾರ, ಐಎಎಸ್ ಪ್ರೋಬೇಷನರಿ ಅಧಿಕಾರಿ ರೀತಿಕಾ ವರ್ಮಾ ಹಾಗೂ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಪುಸ್ತಕ ನೀಡಿ, ಸ್ವಾಗತಿಸಿದರು. ಬಳಿಕ‌ಜಿಲ್ಲಾ ಪಂಚಾಯತಿ ಸಿಇಓ ಹಾಗೂ ಪ್ರಭಾರ ಡಿಇಸಿಯಾಗಿದ್ದ ಭುವನೇಶ ಪಾಟೀಲ್ ಅವರು ಅಧಿಕಾರ ಹಸ್ತಾಂತರ ಮಾಡಿದರು. ಇನ್ನೂ ಅಧಿಕಾರ ಸ್ವೀಕರಿಸುವ ಮುನ್ನ ನಾಗಾ ಸಾಧುಗಳ ಆರ್ಶೀವಾದವನ್ನು ನೂತನ‌ ಡಿಸಿಯವರು ಪಡೆದು ಅಧೀಕಾರ ಸ್ವೀಕರಿಸಿದರು.‌ ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು, ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾ ಪದಾಧಿಕಾರಿಗಳು, ಹಿತೈಷಿಗಳು ಇದ್ದರು.

Tags:

error: Content is protected !!