BELAGAVI

ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿಕಲಚೇತನರ ಕಲ್ಯಾಣಕ್ಕೆ ಹೊಸ ಭರವಸೆ!

Share

ಬೆಳಗಾವಿ ಗ್ರಾಮೀಣ ಕ್ಷೇತ್ರದ ಒಟ್ಟು 7 ಗ್ರಾಮ ಪಂಚಾಯತಿಗಳ ‘ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ’ (VRWs) ನೇಮಕಾತಿ ಆದೇಶ ಪತ್ರಗಳನ್ನು ಇಂದು ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು. ಈ ನೇಮಕಾತಿಯು ಗ್ರಾಮೀಣ ಭಾಗದ ವಿಕಲಚೇತನರ ಸಬಲೀಕರಣ ಹಾಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

ಆಯ್ಕೆಯಾದ ಎಲ್ಲಾ ಕಾರ್ಯಕರ್ತರಿಗೂ ಅಭಿನಂದನೆಗಳು ಹಾಗೂ ನಿಮ್ಮ ಸೇವೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಲಿ ಎಂದು ಹಾರೈಸುತ್ತೇನೆ.

​ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮಾಜಿ ತಾಲೂಕಾ ಪಂಚಾಯತ್ ಅಧ್ಯಕ್ಷರಾದ ಶಂಕರಗೌಡ ಪಾಟೀಲ, ಅಡಿವೇಶ್ ಇಟಗಿ ಹಾಗೂ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳಾದ ನಾಮದೇವ್ ಬಿಲ್ಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:

error: Content is protected !!