BELAGAVI

ಬೆಳಗಾವಿಯಲ್ಲಿ ಬಿಎಸ್‌ಎನ್‌ಎಲ್ ನಿವೃತ್ತ ನೌಕರರ ಆಕ್ರೋಶ: ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಬೀದಿಗಿಳಿದ ಪ್ರತಿಭಟನಾಕಾರರು

Share

ಕೇಂದ್ರ ಸರ್ಕಾರದ ನೂತನ ಕಾನೂನುಗಳ ವಿರುದ್ಧ ಬಿಎಸ್‌ಎನ್‌ಎಲ್ ನಿವೃತ್ತ ನೌಕರರು ಸಿಡಿದೆದ್ದಿದ್ದಾರೆ. ಬೆಳಗಾವಿಯಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದ ಆಲ್ ಇಂಡಿಯಾ ಬಿಎಸ್ ಎನ್ ಎಲ್ ನೌಕರರ ಸಂಘ, ಪಿಂಚಣಿದಾರರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸ ನಿಲ್ಲಲಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಬೆಳಗಾವಿಯಲ್ಲಿಂದು ಆಲ್ ಇಂಡಿಯಾ ಬಿಎಸ್ ಎನ್ ಎಲ್ ನೌಕರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಸಂಘದ ಉಪಾಧ್ಯಕ್ಷ ರಾಮು ತಟಪಟಿ, ಸರ್ಕಾರವು ಪಿಂಚಣಿದಾರರಿಗೆ ಮಾರಕವಾದ ಕಾನೂನುಗಳನ್ನು ಜಾರಿಗೊಳಿಸಿದ್ದು, ಇದನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಪಿಂಚಣಿ ನವೀಕರಣ ಪ್ರಕ್ರಿಯೆ ವಿಳಂಬವಾಗುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ನಿವೃತ್ತ ನೌಕರರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿರಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾರ್ಯದರ್ಶಿ ಜಿ. ಎ. ದಳವಾಯಿ ಮಾತನಾಡಿ, ಸರ್ಕಾರದ ಹೊಸ ‘ವ್ಯಾಲಿಡೇಷನ್’ ಕಾನೂನು ಪಿಂಚಣಿದಾರರಿಗೆ ಕೊಡಲಿ ಏಟಾಗಿದೆ. ನಾವು ಸರ್ಕಾರಕ್ಕೆ ಹೊರೆಯಾಗಿಲ್ಲ, 8ನೇ ವೇತನ ಆಯೋಗದ ಅಡಿಯಲ್ಲಿ ನಮಗೂ ಸೌಲಭ್ಯಗಳನ್ನು ನೀಡಬೇಕು ಎಂದು ಒತ್ತಾಯಿಸಿದರು. ಬೈಟ್

ದೇಶಾದ್ಯಂತ ನಿವೃತ್ತ ನೌಕರರು ಹೋರಾಟ ನಡೆಸುತ್ತಿದ್ದು, ಸರ್ಕಾರ ತರಾತುರಿಯಲ್ಲಿ ಜಾರಿಗೊಳಿಸಿದ ಹೊಸ ಕಾನೂನುಗಳನ್ನು ರದ್ದುಪಡಿಸಿ, 5ನೇ ವೇತನ ಆಯೋಗದ ಶಿಫಾರಸಿನಂತೆ ಸೌಲಭ್ಯ ಒದಗಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಿಎಸ್‌ಎನ್‌ಎಲ್ ನಿವೃತ್ತ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.

Tags:

error: Content is protected !!