Hukkeri

ಖತರ್ನಾಕ್ ರಿಜಿಸ್ಟ್ರಾರ್ ಆಟಕ್ಕೆ ಪೊಲೀಸರ ಬ್ರೇಕ್: ಜಮೀನು ವಂಚನೆ ಪ್ರಕರಣದಲ್ಲಿ ಸಬ್ ರಿಜಿಸ್ಟ್ರಾರ್ ಸೇರಿ ಇಬ್ಬರ ಬಂಧನ!

Share

ನಕಲಿ ದಾಖಲೆ ಸೃಷ್ಟಿಸಿ ಜಮೀನು ಖರೀದಿ, ಮಾರಾಟ ಮಾಡಿಸಿದ ಆರೋಪದಡಿ ಹುಕ್ಕೇರಿ ತಾಲೂಕಾ ಸಬ್ ರಿಜಿಸ್ಟ್ರಾರ್ ಮಡಿವಾಳಯ್ಯ ಬಾನಿಮಠ ಹಾಗೂ ಬಾಂಡ್ ರೈಟರ್ ಆನಂದ ದಡ್ಡಿಮನಿ ಅವರನ್ನು ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಕಳೆದ 16 ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳು ನಿರಪೇಕ್ಷಣಾ ಜಾಮೀನು ಮಂಜೂರಾದ ಬಳಿಕ ಜಾಮೀನು ಪಡೆಯಲು ಬಂದಿದ್ದರು.
ಜಾಮೀನು ಕಾಗದಗಳನ್ನು ತೋರಿಸಿ ನಿರಾಳರಾಗುವಷ್ಟರಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಹೊಸ ಪ್ರಕರಣ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಯಮಕನಮರಡಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ತನಿಖೆಯನ್ನು ಹುಕ್ಕೇರಿ ಪೊಲೀಸರು ಕೈಗೊಂಡಿದ್ದಾರೆ.

Tags:

error: Content is protected !!