Vijaypura

ಸಚಿವ ಸಂತೋಷ್ ಲಾಡ್ ಮೇಲೆ ಕ್ರಮಕ್ಕೆ ಅಗ್ರಹಿಸಿ ಪ್ರತಿಭಟನೆ

Share

ವಿಜಯಪುರ ನಗರದಲ್ಲಿ ಹಡಪದ ಸಮಾಜದ ಮುಖಂಡರು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಹಡಪದ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿದ್ದಕ್ಕೆ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಸಚಿವರನ್ನು ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿದರು. ಜನಪ್ರತಿನಿಧಿಯಾಗಿ ಸಚಿವರು ಸಮಾಜದ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಖಂಡಿಸಿದರು. ಇನ್ನೂ ಹಡಪದ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ ಲಾಡ ಅವರು ಕೂಡಲೇ ರಾಜೀನಾಮೆ ನೀಡಬೇಕು, ಇಲ್ಲವಾದರೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹಡಪದ ಸಮಾಜದ ಜಿಲ್ಲಾಧ್ಯಕ್ಷ ದಯಾನಂದ ಹಡಪದ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ. ಒಬ್ಬ ಜನಪ್ರತಿನಿಧಿಯಾಗಿ ಒಂದು ಸಮಾಜದ ಬಗ್ಗೆ ಈ ರೀತಿ ಕೀಳು ಮಟ್ಟದ ಹೇಳಿಕೆ ನೀಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

Tags:

error: Content is protected !!