ವಿಜಯಪುರ ನಗರದ ವಾರ್ಡ್ ನಂಬರ್ 4ರಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಬಡಾವಣೆ ನಿವಾಸಿಗಳು ಹಿಡಿದು ಧರ್ಮದೇಟು ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಕಳ್ಳತನ ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ, ಅನುಮಾನಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

