ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಅಪ್ಪಾಜಿ ಬಬಲೇಶ್ವರ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷೆ ಶಿವಲೀಲಾ ವಿನಯ ಕುಲಕರ್ಣಿ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಾಜ್ಯ ಸಚಿವರ ಸ್ಥಾನಮಾನವನ್ನು ನೀಡಿ, ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟವಾಗಿದ್ದು, ತಕ್ಷಣದಿಂದಲೇ ಜಾರಿಯಾಗಿದೆ ಎಂದು ತಿಳಿಸಲಾಗಿದೆ. ರಾಜ್ಯ ಸಚಿವರ ಸ್ಥಾನಮಾನ ದೊರೆತ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ವಿವಿಧ ಜನಪ್ರತಿನಿಧಿಗಳು ಅವರನ್ನು ಅಭಿನಂದಿಸಿದ್ದಾರೆ.
