BELAGAVI

ಬೆಳಗಾವಿಯಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಮಲಗುವ ಕೋಣೆಯಲ್ಲಿ ಹೊಲ್ಡರ್’ನಲ್ಲಿ ಹಿಡನ್ ಕ್ಯಾಮೆರಾ ಇಟ್ಟು ಖಾಸಗಿ ಕ್ಷಣಗಳ ಶೂಟಿಂಗ್

Share

ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಂತ್ರಿಕತೆಯನ್ನು ದುರುಪಯೋಗಪಡಿಸಿಕೊಂಡು ಮಹಿಳೆಯೊಬ್ಬರ ಖಾಸಗಿ ಕ್ಷಣಗಳನ್ನು ಸೆರೆಹಿಡಿದಿದ್ದ ಗ್ಯಾಂಗ್‌ವೊಂದನ್ನು ಮಾರ್ಕೆಟ್ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಲೈಟ್ ಬಲ್ಬ್ ಹೋಲ್ಡರ್ ಮಾದರಿಯ ‘ಹಿಡನ್ ಕ್ಯಾಮೆರಾ’ ಬಳಸಿ ಈ ಕೃತ್ಯ ಎಸಗಲಾಗಿದೆ. ಮನೆಯ ಒಳಗೆ ರಹಸ್ಯವಾಗಿ ಕ್ಯಾಮೆರಾ ಅಳವಡಿಸಿದ್ದ ಆರೋಪಿಗಳು, ಮಹಿಳೆಯ ಖಾಸಗಿ ದೃಶ್ಯಗಳನ್ನು ಚಿತ್ರೀಕರಿಸಿದ್ದರು. ಬಳಿಕ ಈ ದೃಶ್ಯಗಳನ್ನು ತೋರಿಸಿ 50 ಲಕ್ಷ ರೂಪಾಯಿ ನೀಡುವಂತೆ ಸಂತ್ರಸ್ತೆಗೆ ಜೀವ ಬೆದರಿಕೆ ಹಾಕಿದ್ದರು. ಈ ಬಗ್ಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ತಕ್ಷಣ ಕಾರ್ಯಪ್ರವೃತ್ತರಾದ ಮಾರ್ಕೆಟ್ ಪೊಲೀಸರು ಸಮೀರ್ ಶೇಖ್, ಅಬ್ದುಲ್ ರಶೀದ್ ಮಕಾಂದಾರ ಮತ್ತು ಮೊಹ್ಮದ್ ದಿಲಾವರ್ ಎಂಬ ಮೂವರು ಕಿರಾತಕರನ್ನು ಬಂಧಿಸಿದ್ದಾರೆ. ಈ ಪ್ರಕರಣದ ಬೆನ್ನಲ್ಲೇ ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಅವರು ಸಾರ್ವಜನಿಕರಿಗೆ ಮಹತ್ವದ ಜಾಗೃತಿ ಸಂದೇಶ ನೀಡಿದ್ದಾರೆ. ಹಿಡನ್ ಕ್ಯಾಮೆರಾಗಳ ಬಗ್ಗೆ ಜನರು ಎಚ್ಚರದಿಂದಿರಬೇಕು. ಇಂತಹ ಬ್ಲ್ಯಾಕ್‌ಮೇಲ್ ತಂತ್ರಗಳಿಗೆ ಎದರದೆ ತಕ್ಷಣ ಪೊಲೀಸರನ್ನು ಸಂಪರ್ಕಿಸಬೇಕು ಎಂದು ಆಯುಕ್ತರು ಮನವಿ ಮಾಡಿದ್ದಾರೆ

Tags:

error: Content is protected !!