Politics

ಅಬಕಾರಿ ಇಲಾಖೆ ಭ್ರಷ್ಟಾಚಾರದ ಅಖಾಡ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ! ಅಬಕಾರಿ ಇಲಾಖೆಯ ಭ್ರಷ್ಟಾಚಾರದ ಬಗ್ಗೆ ಸಿದ್ಧರಾಮಯ್ಯ ಮೌನ ಮೂರ್ತಿಯಾಗಿದ್ದಾರೆಂದು ಆರೋಪ

Share

ಅಬಕಾರಿ ಇಲಾಖೆ ಭ್ರಷ್ಟಾಚಾರದ ಎ-1 ಕೇಂದ್ರ
ಕಾಸಿಗಾಗಿ ಪೋಸ್ಟಿಂಗ್ ಆರೋಪಿಸಿದ ಆರ್. ಅಶೋಕ್
ವರ್ಗಾವಣೆಯಲ್ಲಿ ಜಾತಿ ರಾಜಕಾರಣ: ಅಶೋಕ್ ಆಕ್ರೋಶ
ಭ್ರಷ್ಟಾಚಾರದ ಬಗ್ಗೆ ಸಿಎಂ ಮೌನವೇಕೆ?: ಪ್ರಶ್ನೆ

ವಿಧಾನಸಭೆ ಅಧಿವೇಶನದಲ್ಲಿ ಇಂದು ಅಬಕಾರಿ ಇಲಾಖೆಯ ಭ್ರಷ್ಟಾಚಾರದ ವಿಚಾರ ಭಾರಿ ಸಂಚಲನ ಮೂಡಿಸಿತು. ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಸರ್ಕಾರದ ವಿರುದ್ಧ ಹರಿಹಾಯ್ದು, ಅಬಕಾರಿ ಇಲಾಖೆಯು ಭ್ರಷ್ಟಾಚಾರದ ಕೇಂದ್ರವಾಗಿದೆ ಎಂದು ಗಂಭೀರ ಆರೋಪ ಮಾಡಿದರು.
ವಿಧಾನಸಭೆಯಲ್ಲಿಂದು ಅಬಕಾರಿ ಇಲಾಖೆಯ ಭ್ರಷ್ಟಾಚಾರದ ಕುರಿತು ಪ್ರಸ್ತಾಪಿಸಿದ ವಿಪಕ್ಷ ನಾಯಕ ಆರ್. ಅಶೋಕ್, ಅಬಕಾರಿ ಇಲಾಖೆಯು ಭ್ರಷ್ಟಾಚಾರದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಕಿಡಿಕಾರಿದರು. ಮಂಥ್ಲಿ ದಂಧೆ, ಕಾಸಿಗಾಗಿ ಪೋಸ್ಟಿಂಗ್ ಮತ್ತು ವಿಭಾಗಾವಾರು ಹಣ ನಿಗದಿ ಮಾಡುವ ಹೊಸ ಬಗೆಯ ಲೂಟಿ ರಾಜ್ಯದಲ್ಲಿ ನಡೆಯುತ್ತಿದೆ. ಪ್ರತಿದಿನ ಹೊರಬರುತ್ತಿರುವ ಆಡಿಯೋ-ವಿಡಿಯೋಗಳು ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದ್ದರೂ, ಅಬಕಾರಿ ಇಲಾಖೆಯ ಭ್ರಷ್ಟಾಚಾರದ ಬಗ್ಗೆ ಸಿದ್ಧರಾಮಯ್ಯ ಮೌನ ಮೂರ್ತಿಯಾಗಿದ್ದಾರೆ. ಇದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಬೇರೆ ರಾಜ್ಯಗಳ ಚುನಾವಣೆಗಾಗಿ ರಾಜ್ಯದ ಹಣವನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.
ಇದೇ ವೇಳೆ ಅಧಿಕಾರಿಗಳ ವರ್ಗಾವಣೆ ಮತ್ತು ಕೆಲಸಗಳಲ್ಲಿ ನಡೆಯುತ್ತಿರುವ ಜಾತಿ ರಾಜಕಾರಣದ ಬಗ್ಗೆಯೂ ಅಶೋಕ್ ಅಸಮಾಧಾನ ವ್ಯಕ್ತಪಡಿಸಿದರು. ಈ ಹಿಂದೆ ಕೇವಲ ಸಚಿವರು ಮಾಡುತ್ತಿದ್ದ ಜಾತಿ ರಾಜಕಾರಣ, ಈಗ ಅಧಿಕಾರಿಗಳ ಮಟ್ಟಕ್ಕೂ ಹರಡಿದೆ. ಇದಕ್ಕೆ ಸಂಬಂಧಿಸಿದ ಆಡಿಯೋ ಪುರಾವೆಗಳು ತಮ್ಮ ಬಳಿ ಇವೆ ಎಂದು ತಿಳಿಸಿದ ಅವರು, ತಕ್ಷಣವೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ಈ ಆರೋಪಗಳು ಸದನದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಯಿತು.

Tags:

error: Content is protected !!