ರಾಜ್ಯ ರಾಜಕಾರಣದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ದೆಹಲಿ ಪ್ರವಾಸ ಭಾರಿ ಸಂಚಲನ ಮೂಡಿಸಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್, ಸತೀಶ್ ಜಾರಕಿಹೊಳಿ ಮತ್ತು ತಾವು ಸಮಾನ ಮನಸ್ಕರು ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಅಷ್ಟೇ ಅಲ್ಲದೆ, ಹೊಸ ಪೀಳಿಗೆಗೆ ಅಧಿಕಾರ ಬಿಟ್ಟುಕೊಡುವ ಬಗ್ಗೆಯೂ ಮಾರ್ಮಿಕವಾಗಿ ಮಾತನಾಡಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ದೆಹಲಿ ಪ್ರವಾಸ ಭಾರಿ ಸಂಚಲನ ಮೂಡಿಸಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್, ಸತೀಶ್ ಜಾರಕಿಹೊಳಿ ಮತ್ತು ತಾವು ಸಮಾನ ಮನಸ್ಕರು ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಅಷ್ಟೇ ಅಲ್ಲದೆ, ಹೊಸ ಪೀಳಿಗೆಗೆ ಅಧಿಕಾರ ಬಿಟ್ಟುಕೊಡುವ ಬಗ್ಗೆಯೂ ಮಾರ್ಮಿಕವಾಗಿ ಮಾತನಾಡಿದ್ದಾರೆ
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಸತೀಶ್ ಜಾರಕಿಹೊಳಿ ಅವರ ದೆಹಲಿ ಪ್ರವಾಸಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಸತೀಶ್ ಜಾರಕಿಹೊಳಿ ಅವರು ನಮ್ಮ ಸಿನಿಯರ್ ಲೀಡರ್. ನಾವೆಲ್ಲ ವಾರಕ್ಕೊಮ್ಮೆ ಮಾತಾಡ್ತಾ ಇರ್ತಿವಿ. ನನ್ನ ಜೊತೆ ಕಾರ್ಯಾಧ್ಯಕ್ಷರಾಗಿ ಸತೀಶ್ ಜಾರಕಿಹೊಳಿ ಕೆಲಸ ಮಾಡಿದ್ದಾರೆ. ವಿಷಯ ಹಂಚಿಕೊಳ್ತೀವಿ. ನಾವಿಬ್ಬರೂ ಸಮಾನ ಮನಸ್ಕರು. ಸತೀಶ್ ಅವರಿಗೂ ಪಕ್ಷದ ಬಗ್ಗೆ ಅಪಾರವಾದ ಚಿಂತನೆಯಿದೆ. ಸರ್ಕಾರವನ್ನ ಮತ್ತೇ ಅಧಿಕಾರಕ್ಕೆ ತರೋದಕ್ಕೆ ಪ್ಲಾನ್ ಮಾಡುತ್ತಿದ್ದೇವೆ. ಈ ಸರ್ಕಾರ ಮತ್ತೇ ವಾಪಸ್ ಬರುತ್ತೆ ಎಂದಿದ್ದಾರೆ.
ಇನ್ನು ಸಂಪುಟದಲ್ಲಿ ಅವಕಾಶ ನೀಡುವಂತೆ ಶಾಸಕರಿಂದ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲರಿಗೂ ಸಚಿವರಾಗುವ ಆಸೆ ಇರುತ್ತದೆ. ಇದರಲ್ಲಿ ತಪ್ಪೇನಿದೆ. ಎಷ್ಟು ದಿನ ನಾವೇ ಇಲ್ಲಿ ಕುಳಿತುಕೊಳ್ಳೋಕೆ ಆಗುತ್ತದೆ. ಹೊಸ ಪೀಳಿಗೆ ಬರಬೇಕು. ಹೊಸ ಆಲೋಚನೆ ಬರಬೇಕು. ಎಲ್ಲವನ್ನು ಪಾರ್ಟಿ ಲೀಡರಶಿಪ್ ತಿರ್ಮಾಣ ಮಾಡುತ್ತೇ ಎಂದಿದ್ದಾರೆ.
