• ದೆಹಲಿಯ ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ.
• ಶರ್ಟ್ ಬಿಚ್ಚಿ ಅರೆಬೆತ್ತಲೆಯಾಗಿ ಘೋಷಣೆ ಕೂಗಿದ ಕಾರ್ಯಕರ್ತರು.
• ಯುವ ಕಾಂಗ್ರೆಸ್ ನಡೆಯನ್ನು ಸಮರ್ಥಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ.
• ಪ್ರಧಾನಿ ಮೋದಿ ‘ಡರಪೋಕ್’ ಎಂದು ಖರ್ಗೆ ವಾಗ್ದಾಳಿ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯು ಇಂದು ಅನಿರೀಕ್ಷಿತ ಬೆಳವಣಿಗೆಗೆ ಸಾಕ್ಷಿಯಾಯಿತು. ಸಭಾಂಗಣದೊಳಗೆ ನುಗ್ಗಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಶರ್ಟ್ ಬಿಚ್ಚಿ ಘೋಷಣೆ ಕೂಗುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ಘಟನೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದು, ಪ್ರಧಾನಿ ಮೋದಿ ವಿರುದ್ಧ ಗಂಭೀರ ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಭಾಂಗಣದೊಳಗೆ ಶರ್ಟ್ ಬಿಚ್ಚಿ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯರ್ತರ ನಡೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಯೂತ್ ಕಾಂಗ್ರೆಸ್ ಮುಖಂಡರ ಬಂಧನವನ್ನು ಖಂಡಿಸುತ್ತೇನೆ ಎಂದಿರುವ ಖರ್ಗೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಸಹಜ. ದೇಶದ ಹಿತಕ್ಕಾಗಿ ಇಂತಹ ಪ್ರೊಟೆಸ್ಟ್ಗಳು ಆಗುತ್ತವೆ ಎಂದು ಹೇಳಿದ್ದಾರೆ. ಕಾಮನ್ ವೆಲ್ತ್ ಗೇಮ್ ವೇಳೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿರಲಿಲ್ವಾ? ಯೂತ್ ಕಾಂಗ್ರೆಸ್ನವರು ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರೊಟೆಸ್ಟ್ ನಡೆಸಿದ್ದಾರೆ. ಯೂತ್ ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಮೋದಿ ಮಾತನಾಡಿರುವು ಮತ್ತು ಕಾರ್ಯಕರ್ತರ ಮೇಲಿನ ದೌರ್ಜನ್ಯವನ್ನು ಖಂಡಿಸೋದಾಗಿ ಖರ್ಗೆ ಹೇಳಿದ್ದಾರೆ. ಅಲ್ಲದೆ, ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದ್ದನ್ನು ಪ್ರಧಾನಿ ಮೋದಿ ಕೇಳುತ್ತಿದ್ದು, ಮೋದಿ ಡರಪೋಕ್ ಆಗಿದ್ದಾರೆ. ಅವರು ಸರೆಂಡರ್ ಆಗಿದ್ದಾರೆ ಅಂತಲೂ ಗಂಭೀರ ಆರೋಪ ಮಾಡಿದ್ದಾರೆ.
