khanapur

ಐತಿಹಾಸಿಕ ಹಲಸಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ವಿಠ್ಠಲ ಹಲಗೇಕರ

Share

ಖಾನಾಪೂರ ತಾಲೂಕಿನ ಐತಿಹಾಸಿಕ ಮತ್ತು ಧಾರ್ಮಿಕ ಪರಂಪರೆಯನ್ನು ಹೊಂದಿರುವ ಹಲಸಿ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮೀ ಜಾತ್ರೆಯ ಹಿನ್ನೆಲೆಯಲ್ಲಿ ಹಲಸಿ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಕೋಟ್ಯಂತರ ರೂಪಾಯಿಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ಶಾಸಕ ವಿಠ್ಠಲ ಹಲಗೇಕರ ನೆರವೇರಿಸಿದರು.

ಗ್ರಾಮಸ್ಥರಿಗೆ ಅಗತ್ಯವಾದ ಮೂಲಭೂತ ಸೌಕರ್ಯ ಹಾಗೂ ಗ್ರಾಮದ ಪ್ರಮುಖ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

ರಸ್ತೆ ಅಭಿವೃದ್ಧಿ: ಛತ್ರಪತಿ ಶಿವಾಜಿ ಮಹಾರಾಜ ಚೌಕದಿಂದ ಗುಂಡಪಿ ರಸ್ತೆಯವರೆಗೆ 80 ಲಕ್ಷ ರೂ. ಮಂಜೂರಾಗಿದೆ.
ಭಕ್ತರ ಸೌಲಭ್ಯಕ್ಕಾಗಿ ದೇವಸ್ಥಾನದಲ್ಲಿ ಫ್ಲೋರ್ ಅಳವಡಿಸಲು 5 ಲಕ್ಷ ರೂ. ಅನುದಾನ ಮಂಜೂರಾಗಿದೆ.
ಅಲ್ಪಸಂಖ್ಯಾತರ ಯೋಜನೆಯಡಿ 5 ಲಕ್ಷ ರೂ. ವೆಚ್ಚದಲ್ಲಿ ಸಿಮೆಂಟ್ ರಸ್ತೆ ನಿರ್ಮಾಣವಾಗಲಿದೆ.
ಟ್ರಾಫಿಕ್ ಸಮಸ್ಯೆಗೆ ಪರಿಹಾರವಾಗಿ ಹಲಶಿವಾಡಿ ಮತ್ತು ಗುಂಡಪಿಗಾಗಿ ಪ್ರತ್ಯೇಕ ಬೈಪಾಸ್ ರಸ್ತೆ ನಿರ್ಮಾಣ ಮಾಡಲಾಗುತ್ತದೆ. 8.7 ಲಕ್ಷ ರೂ. ವೆಚ್ಚದಲ್ಲಿ ಸಿಮೆಂಟ್ ರಸ್ತೆ ಕಾಮಗಾರಿ ನಡೆಯಲಿದೆ. ಸರ್ಕಾರಿ ಶಾಲೆ ದುರಸ್ತಿಗೆ 5 ಲಕ್ಷ ರೂ. ಮತ್ತು ಕುಡಿಯುವ ನೀರಿಗಾಗಿ ಎರಡು ಹೊಸ ಬೋರ್‌ವೆಲ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ವಿಠ್ಠಲ ಹಲಗೇಕರ ತಿಳಿಸಿದರು.

ಹಲಸಿ ಗ್ರಾಮವು ಕೇವಲ ಒಂದು ಗ್ರಾಮವಲ್ಲ, ಅದು ನಮ್ಮ ತಾಲೂಕಿನ ಭಕ್ತಿಯ ಕೇಂದ್ರಬಿಂದುವಾಗಿದೆ. ಇಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಯಾತ್ರಿಕರು ಮತ್ತು ಗ್ರಾಮಸ್ಥರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಹಲಸಿವಾಡಿ ಮತ್ತು ಗುಂಡಪಿ ಗ್ರಾಮದ ಪಂಚಕಮಿಟಿ ಸದಸ್ಯರು, ಮಹಾಲಕ್ಷ್ಮಿ ಯಾತ್ರಾ ಸಮಿತಿಯ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags:

error: Content is protected !!