ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರು ಹುಬ್ಬಳ್ಳಿಯಲ್ಲಿ ಸಂಭ್ರಮಾಚರಣೆ ನಡೆಸಿದರು.


ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಸರ್ವೋದಯ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹಾಗೂ ಪರಸ್ಪರ ಸಿಹಿ ತಿನ್ನಿಸುವ ಮೂಲಕ ವಿಜಯೋತ್ಸವ ಆಚರಿಸಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರ ಅಳಿಯ ರಜತ್ ಉಳ್ಳಾಗಡ್ಡಿಮಠ ಅವರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಈ ವೇಳೆ ಕಾರ್ಯಕರ್ತರು “ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್” ಎಂದು ಘೋಷಣೆ ಕೂಗಿ ತಮ್ಮ ಬೆಂಬಲ ವ್ಯಕ್ತಪಡಿಸಿದರು.
ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
