Athani

ಅಥಣಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 108 ಮೊಬೈಲ್ ಫೋನ್‌ಗಳು ವಾಪಸ್!

Share

ಪೊಲೀಸ್ ಇಲಾಖೆಯ ಕಾರ್ಯಾಚರಣೆಯಲ್ಲಿ ಕಳುವಾಗಿದ್ದ ಹಾಗೂ ಕಳೆದುಹೋಗಿದ್ದ 108 ಮೊಬೈಲ್ ಫೋನ್‌ಗಳನ್ನು ಮಾಲೀಕರಿಗೆ ಹಸ್ತಾಂತರಿಸಲಾಯಿತು. ಸಿಇಐಆರ್ ಪೋರ್ಟಲ್‌ನಲ್ಲಿ ದಾಖಲಾಗಿದ್ದ ದೂರುಗಳ ಆಧಾರದ ಮೇಲೆ ಅಥಣಿ, ಕಾಗವಾಡ, ಚಿಗಳಿ, ಹಾರುಗೇರಿ, ಕುಡಚಿ ಹಾಗೂ ರಾಯಬಾಗ ವ್ಯಾಪ್ತಿಯಲ್ಲಿ ಈ ಫೋನ್‌ಗಳನ್ನು ಪತ್ತೆ ಹಚ್ಚಲಾಗಿದೆ.

ಈ ಕುರಿತು ಮಾತನಾಡಿದ ಡಿವೈಎಸ್ಪಿ ಪ್ರಶಾಂತ್ ಮುನ್ನೊಳ್ಳಿ, ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳ ತನಿಖೆಯಡಿ ಈಗಾಗಲೇ ಸಾವಿರಕ್ಕೂ ಅಧಿಕ ಮೊಬೈಲ್‌ಗಳನ್ನು ವಶಕ್ಕೆ ಪಡೆದು ಮಾಲೀಕರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು.

ಮೊಬೈಲ್ ಕಳೆದುಹೋದ ಅಥವಾ ಕಳುವಾದ ಸಂದರ್ಭಗಳಲ್ಲಿ ಸಿಇಐಆರ್ ಪೋರ್ಟಲ್‌ನಲ್ಲಿ ದೂರು ದಾಖಲಿಸಿದರೆ, ಸಿಮ್ ಕಾರ್ಡ್ ಬಳಕೆಯ ಆಧಾರದ ಮೇಲೆ ಪತ್ತೆ ಹಚ್ಚಿ ಫೋನ್‌ಗಳನ್ನು ಮರಳಿ ನೀಡಲಾಗುತ್ತದೆ ಎಂದು ಹೇಳಿದರು.

Tags:

error: Content is protected !!