Vijaypura

ಭೀಮಾ ನದಿಯಲ್ಲಿ ಈಜಲು ತೆರಳಿದ ಯುವಕ ನೀರು ಪಾಲು; ಶೋಧ ಕಾರ್ಯ ಮುಂದುವರಿಕೆ

Share

ವಿಜಯಪುರ:
ಜಿಲ್ಲೆಯ ಇಂಡಿ ತಾಲೂಕಿನ ಪಡನೂರು ಗ್ರಾಮದ ಸಮೀಪದ ಭೀಮಾ ನದಿಯಲ್ಲಿ ಈಜಲು ತೆರಳಿದ ಯುವಕ ನೀರು ಪಾಲಾದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಪಡನೂರು ಗ್ರಾಮದ ಅನೀಲಕುಮಾರ ಪೂಜಾರಿ ಎಂಬ ಯುವಕ ಇಂದು ಬೆಳಿಗ್ಗೆ ಭೀಮಾ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ನಾಪತ್ತೆಯಾಗಿದ್ದಾನೆ. ಘಟನೆ ತಿಳಿದು ಗ್ರಾಮಸ್ಥರು ತಕ್ಷಣವೇ ಯುವಕನಿಗಾಗಿ ಶೋಧ ಕಾರ್ಯ ಆರಂಭಿಸಿದರು.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮೋಟಾರ್ ಬೋಟ್ ಸಹಾಯದಿಂದ ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆದರೆ ಇತ್ತೀಚಿನ ಮಾಹಿತಿಯಂತೆ ಅನೀಲಕುಮಾರ ಇನ್ನೂ ಪತ್ತೆಯಾಗಿಲ್ಲ.
ಘಟನೆ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಪರಿಸ್ಥಿತಿ ಹೃದಯವಿದ್ರಾವಕವಾಗಿದೆ.
ಈ ಘಟನೆ ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Tags:

error: Content is protected !!