ಉತ್ತರ ಕರ್ನಾಟಕ ಜೀವನಾಡಿ ಕೃಷ್ಣೆಗೆ ಅಡ್ಡಲಾಗಿ ಕಟ್ಟಲಾಗಿರುವ ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಈಗಲೇ ನಿರ್ಧಾರ ಕೈಗೊಂಡಿಲ್ಲಾ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. 2010ರ ಆದೇಶದಂತೆ ತಮ್ಮ ಪಾಲಿನ ನೀರು ಬಳಸಲು ಸಿದ್ಧತೆ ನಡೆಸುತ್ತಿದ್ದು, ಇದಕ್ಕೆ ಆಂಧ್ರ ಪ್ರದೇಶ ಸರ್ಕಾರ ಅಡ್ಡಿಪಡಿಸುತ್ತಿದೆ. ಅಲ್ಲದೆ, ತುಂಗಭದ್ರಾ ಅಣೆಕಟ್ಟೆಯಿಂದ 30 ಟಿಎಂಸಿ ನೀರು ವ್ಯರ್ಥವಾಗುತ್ತಿದ್ದು, ಇದಕ್ಕೆ ಆಂಧ್ರ ಸರ್ಕಾರ ಸಹಕರಿಸುತ್ತಿಲ್ಲ. ಈ ವಿಷಯಗಳ ಬಗ್ಗೆ ಸಂಸದರೊಂದಿಗೆ ಚರ್ಚಿಸಿ, ಕೇಂದ್ರದ ಮೇಲೆ ಒತ್ತಡ ತರಲು ಸಚಿವರಾದ ಹೆಚ್.ಕೆ. ಪಾಟೀಲ್, ಎಂ.ಬಿ. ಪಾಟೀಲ್, ಬೋಸರಾಜು ಅವರೊಂದಿಗೆ ಮಂಗಳವಾರ ದೆಹಲಿಗೆ ತೆರಳುತ್ತಿರುವುದಾಗಿ ಅವರು ತಿಳಿಸಿದರು.

