Bagalkot

ಬಾಗಲಕೋಟೆ ಉಪಸಮರ: ಉಮೇಶ್ ಮೇಟಿಗೆ ಟಿಕೆಟ್ ಘೋಷಣೆ; ಗೆಲುವು ಖಚಿತ ಎಂದ ಸಹೋದರ ಮಲ್ಲಿಕಾರ್ಜುನ ಮೇಟಿ!

Share

ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಕಣ ರಂಗೇರಿದೆ. ಕಾಂಗ್ರೆಸ್ ಹೈಕಮಾಂಡ್ ಉಮೇಶ್ ಮೇಟಿ ಅವರಿಗೆ ಟಿಕೆಟ್ ಘೋಷಿಸುತ್ತಿದ್ದಂತೆ ಮೇಟಿ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ತಂದೆಯವರ ರಾಜಕೀಯ ಪರಂಪರೆ ಹಾಗೂ ಸರ್ಕಾರದ ಜನಪರ ಯೋಜನೆಗಳೇ ನಮಗೆ ಶ್ರೀರಕ್ಷೆ ಎಂದು ಉಮೇಶ್ ಮೇಟಿ ಸಹೋದರ ಮಲ್ಲಿಕಾರ್ಜುನ ಮೇಟಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆ ಉಪಚುನಾವಣೆಗೆ ಉಮೇಶ್ ಮೇಟಿ ಅವರಿಗೆ ಟಿಕೆಟ್ ಅಧಿಕೃತವಾಗಿ ಘೋಷಣೆಯಾದ ಬೆನ್ನಲ್ಲೇ ಅವರ ಸಹೋದರ ಮಲ್ಲಿಕಾರ್ಜುನ ಮೇಟಿ ಪ್ರತಿಕ್ರಿಯೆ ನೀಡಿದ್ದಾರೆ. “ನಮ್ಮ ಕುಟುಂಬದ ಮೇಲೆ ವಿಶ್ವಾಸವಿಟ್ಟು ಟಿಕೆಟ್ ನೀಡಿದ ದೆಹಲಿ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸುತ್ತೇವೆ. ನಮ್ಮ ತಂದೆಯವರ ಮೇಲಿರುವ ಪ್ರೀತಿ ಮತ್ತು ಗೌರವದಿಂದಾಗಿ ಕ್ಷೇತ್ರದಲ್ಲಿ ಯಾರೂ ಟಿಕೆಟ್ ಕೇಳದೆ ನಮಗೆ ಬೆಂಬಲ ನೀಡಿದ್ದಾರೆ. ಕುಟುಂಬದಲ್ಲಿ ಯಾವುದೇ ಅಸಮಾಧಾನವಿಲ್ಲ, ಪಕ್ಷ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಿದ್ದರೂ ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೆವು” ಎಂದು ಅವರು ತಿಳಿಸಿದರು.

ಚುನಾವಣಾ ಗೆಲುವಿನ ಬಗ್ಗೆ ಭರವಸೆ ವ್ಯಕ್ತಪಡಿಸಿದ ಮಲ್ಲಿಕಾರ್ಜುನ ಮೇಟಿ, “ನಮ್ಮ ತಂದೆಯವರು ಪಂಚಾಯಿತಿಯಿಂದ ರಾಷ್ಟ್ರ ಮಟ್ಟದವರೆಗೆ 11 ಚುನಾವಣೆಗಳನ್ನು ಎದುರಿಸಿ ಜನರ ಆಶೀರ್ವಾದ ಪಡೆದಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು, ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಜನರು ಈ ಯೋಜನೆಗಳ ಸದುಪಯೋಗ ಪಡೆದಿದ್ದಾರೆ, ಹೀಗಾಗಿ ಕ್ಷೇತ್ರದಲ್ಲಿ ವಾತಾವರಣ ನಮಗೆ ಪೂರಕವಾಗಿದ್ದು ಈ ಬಾರಿ ನಮ್ಮ ಗೆಲುವು ಶತಸಿದ್ಧ” ಎಂದು ಬಲವಾಗಿ ಪ್ರತಿಪಾದಿಸಿದರು.

Tags:

error: Content is protected !!