Belagavi

ಮಾರ್ಚ್ 14 ರಿಂದ ಸಂಭ್ರಮದ ಬಸವನ ಕುಡಚಿ ಜಾತ್ರಾ ಮಹೋತ್ಸವ

Share

ಪ್ರತಿವರ್ಷದಂತೆ ಈ ವರ್ಷವೂ ಬೆಳಗಾವಿ ತಾಲೂಕಿನ ಬಸವನ ಕುಡಚಿಯ ಶ್ರೀ ಬಸವೇಶ್ವರ,
ಶ್ರೀ ಕಲಮ್ಮೇಶ್ವರ ಹಾಗೂ ಶ್ರೀ ಬ್ರಹ್ಮದೇವರ ಜಾತ್ರಾ ಮಹೋತ್ಸವವು ಇದೇ ಮಾರ್ಚ 14 ರಿಂದ 19, 2026 ರ ವರೆಗೆ ಜರುಗಲಿದ್ದು ತನ್ನಮಿತ್ತ ಈ ಲೇಖನ.

ಚಾರಿತ್ರಿಕ ಗ್ರಾಮ : ಬೆಳಗಾವಿ ನಗರದಿಂದ ಐದು ಕಿ.ಮೀ. ಅಂತರದಲ್ಲಿರುವ ಬಸವನ ಕುಡಚಿ ಗ್ರಾಮವು ಸರ್ವಧರ್ಮಗಳ ಸಂಗಮ ತಾಣವೆನಿಸಿಕೊಂಡಿದೆ. ಬಸವೇಶ್ವರ, ಕಲ್ಮೇಶ್ವರ ಹಾಗೂ ಬ್ರಹ್ಮದೇವರ ಸುಕ್ಷೇತ್ರವಾಗಿರುವ ಈ ಪ್ರದೇಶ ಸಾವಿರಾರು ಭಕ್ತಾದಿಗಳ ಶ್ರದ್ಧಾಕೇಂದ್ರವೆನಿಸಿದೆ. ಕನ್ನಡ-ಮರಾಠಿ ಎಂಬ ಭಾಷಾ ಸಾಮರಸ್ಯದೊಂದಿಗೆ ತನ್ನ ಗತಸಂಸ್ಕೃತಿಯನ್ನು ಇಂದಿಗೂ ಪೋಷಿಸಿ ಬೆಳೆಸಿದೆ.
ಬೆಳಗಾವಿಯ ಪ್ರಾಚೀನ ಗ್ರಾಮಗಳಲ್ಲಿ ಬಸವನ ಕುಡಚಿಗೆ ವಿಶಿಷ್ಟ ಸ್ಥಾನವಿದೆ. ಈ ಗ್ರಾಮ ಸುಮಾರು ಆರೇಳುನೂರು ವರ್ಷಗಳ ಭವ್ಯವಾದ ಇತಿಹಾಸ ಹೊಂದಿರುವುದು ಸರ್ವವಿಧಿತ. ಪ್ರಸ್ತುತ ಗ್ರಾಮದಲ್ಲಿರುವ ದೇವಾಲಯಗಳು, ಪ್ರಾಗೈತಿಹಾಸಿಕ ಅವಶೇಷಗಳಾದ ವೀರಗಲ್ಲುಗಳು, ಸತಿಗಲ್ಲುಗಳು, ವೈಶಿಷ್ಟö್ಯಪೂರ್ಣವಾದ ಸಂಪ್ರದಾಯಗಳನ್ನು ಅವಲೋಕಿಸಿದಾಗ ಊರಿನ ಪ್ರಾಚೀನ ಇತಿಹಾಸ ಅನಾವರಣಗೊಳ್ಳುತ್ತದೆ.
ಬಸವನ ದೇವಾಲಯ : ಕುಡಚಿ ಗ್ರಾಮದ ಮೂಲದೈವ ನಂದಿ ರೂಪದ ಬಸವಣ್ಣ. ಬಸವನೇ ಗ್ರಾಮದ ಸರ್ವಸ್ವ, ಶಕ್ತಿಯ ರೂಪ. ಪ್ರಥಮಪೂಜಾದಾಯಕ. ಬಸವನ ದೇವಸ್ಥಾನವು ಗ್ರಾಮದ ಮಧ್ಯದಲ್ಲಿ ಕೇಂದ್ರಿಕೃತಗೊAಡಿದೆ. ಚೌಕಾಕಾರ ಗದ್ದುಗೆಯ ಮೇಲೆ ಶಿಲಾಗಂಭಗಳಿAದ ನಿರ್ಮಿಸಿರುವ ಬಸವನ ದೇವಸ್ಥಾನಕ್ಕೆ ಚಪ್ಪಡಿಗಲ್ಲುಗಳ ಮಳಿಗೆಗಳನ್ನು ವಿಶಿಷ್ಟವಾಗಿ ರೂಪಿಸಲಾಗಿದೆ. ಈ ದೇವಾಲಯದ ಮಧ್ಯಭಾಗದಲ್ಲಿ ಒಂದು ಅಖಂಡ ಶಿಲಾಗಂಭವಿದ್ದು, ಇದು ದೇವಾಲಯದ ಆಧಾರಗಂಭವೆನ್ನಬಹುದು. ಇದರ ಮೇಲೆಯೇ ಬಸವನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದೆ. ದೇವಸ್ಥಾನದ ಒಳ ಹಾಗೂ ಹೊರ ಭಾಗದಲ್ಲಿ ಒಟ್ಟು 48 ಚಪ್ಪಡಿ ಕಂಬಗಳನ್ನು. ಅದರ ಮೇಲೆಯೂ ಕಟ್ಟಿಗೆಯ ಅಷ್ಟೇ ಕಂಬಗಳನ್ನು ನಿರ್ಮಿಸಲಾಗಿದೆ. ಮಧ್ಯವಿರುವ ಕಂಬದ ಮೇಲೆ ಬಸವ ಪಶ್ಚಿಮಾಭಿಮುಖವಾಗಿ, ಬಲಗಾಲವನ್ನು ಮುಂದಕ್ಕೆ ಚಾಚಿಕೊಂಡು ವಿರಾಜಮಾನವಾಗಿ ಕುಳಿತಿರುವ ದೃಶ್ಯ ರಮಣೀಯವೆನಿಸುತ್ತದೆ. ಕಲ್ಮೇಶ್ವರ ದೇವಾಲಯ: ಗ್ರಾಮದ ಪೂರ್ವಾಭಿಮುಖವಾಗಿ ಕಲ್ಮೇಶ್ವರ ದೇವಾಲಯವಿದೆ. ಇಲ್ಲಿಯ ಶಿವಲಿಂಗ ಪ್ರಾಚೀನವಾದದು. ಸು. 16-17ನೇ ಶತಮಾನದಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆ.

ಜಾತ್ರೆಯ ಪ್ರಾರಂಭ : ಪ್ರತಿವರ್ಷ ಹೋಳಿ ಹುಣ್ಣಿಮೆಯಿಂದ ಚಂದ್ರಮಾನ ಯುಗಾದಿಯ ಅಮವಾಸ್ಯೆಯ ಮಧ್ಯಾವಧಿಯಲ್ಲಿ ಬರುವ ಸೋಮವಾರ (16.3.2026) ಮತ್ತು ಮಂಗಳವಾರ (17.3.2026) ‘ಬಸವೇಶ್ವರ, ಕಲ್ಮೇಶ್ವರ, ಬ್ರಹ್ಮದೇವರ ಜಾತ್ರೆಯು’ ಅತ್ಯಂತ ಸಡಗರದಿಂದ ಜರುಗಲಿದೆ.
ವಿಶೇಷ ಬಂಡಿಗಳು : ಬಸವಣ್ಣನ ಕಿಚ್ಚನ್ನು ದಾಟುವುದು ಇಲ್ಲಿಯ ಸತ್‌ಸಂಪ್ರದಾಯ. 14.3.2026 ರಂದು ಕಿಚ್ಚಿನ ಕಟ್ಟಿಗೆ ತರಲು ಜಾತ್ರೆಯ ಸಲುವಾಗಿಯೇ ವಿಶೇಷವಾಗಿ ನಿರ್ಮಿಸಲಾದ ನಾಲ್ವತ್ತು ಬಂಡಿಗಳಿಗೆ ವಿಶೇಷವಾದ ಪೂಜೆಯನ್ನು ನೆರವೇರಿಸಿ ಬೆಳಗಾವಿ ಹತ್ತಿರದ ಕಾಕತಿ ಗುಡ್ಡಕ್ಕೆ ಗ್ರಾಮಸ್ಥರು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ವೈಭವದಿಂದ ತೆರಳುತ್ತಾರೆ. ಈ ಬಂಡಿಗಳು ಮೂರು ನೂರು ವರ್ಷಗಳ ಇತಿಹಾಸ ಹೊಂದಿವೆ.
ದೇವರಬಂಡಿ : ನಲವತ್ತು ಬಂಡಿಗಳ ಮುಂದಾಳತ್ವವನ್ನು ‘ದೇವರಬಂಡಿ’ಯೆAದು ಕರೆಯಲಾಗುತ್ತದೆ. ಈ ವಿಶೇಷ ದೇವರಬಂಡಿಯು ನೇತೃತ್ವ ಬೇಡಕಾ ಕುಟುಂಬದವರದು. ರಸ್ತೆ ಉದ್ದಕ್ಕೂ ಸರತಿಯಲ್ಲಿ ಈ ಬಂಡಿಗಳು ಸಾಗುವುದೇ ಒಂದು ವೈಭವ, ಅವುಗಳನ್ನು ಕಣ್ತುಂಬಿಕೊಳ್ಳುವುದೇ ಇನ್ನೊಂದು ಸೊಬಗು. ಪ್ರತಿವರ್ಷ ಜರುಗುವ ಬಸವನ ಮೇಲಿನ ಭಕ್ತಿಭಾವಗಳಿಗೆ ಇದೊಂದು ದ್ಯೋತಕವಾಗಿ ನಿಲ್ಲುತ್ತದೆ. ತೆರಳಿದ ಎಲ್ಲ ಬಂಡಿಗಳಿಗೂ ಕಾಕತಿ ಗುಡ್ಡದಲ್ಲಿ ವಿಶೇಷವಾದ ಪೂಜೆ ಸಲ್ಲಿಸಿ ಬಸವನ ಜಾತ್ರೆಯ ಕಿಚ್ಚಿಗಾಗಿ ನೆರಳೆ ಹಣ್ಣಿನ ಮರದ ಕಟ್ಟಿಗೆಗಳನ್ನು ಸಂಗ್ರಹಿಸಲಾಗುತ್ತದೆ. ಬಸವನ ಕುಡಚಿಯಿಂದ ಕಾಕತಿ ಗುಡ್ಡದ ವರೆಗೆ ಸುಮಾರು ಹದಿನೈದು ಕಿ.ಮೀ.ಕ್ಕೂ ಹೆಚ್ಚು ದೂರ ಪಯಣಿಸುವ ಭಕ್ತರು ಬರೆಗಾಲಿನಿಂದಲೇ ಪಯಣಿಸುವುದು ಅವರ ಭಕ್ತಿ ಪರಾಕಾಷ್ಠತೆಗೆ ಸಾಕ್ಷಿಯಾಗಿದೆ ನಿಂತಿದೆ. ಹೀಗೆ ಕಾಕತಿ ಗುಡ್ಡದಲ್ಲಿ ಸಂಗ್ರಹಿಸಿದ ನೆರಳೆ ಹಣ್ಣಿನ ಕಟ್ಟಿಗೆಗಳನ್ನು ತಮ್ಮ ತಮ್ಮ ಬಂಡಿಗಳಲ್ಲಿ ಹೇರಿ ಸರತಿ ಸಾಲಿನಲ್ಲಿ ಪುನಃ ಶನಿವಾರ ಸಾಯಂಕಾಲವೇ ಬಸವನ ಕುಡಚಿಗೆ ಮರಳಿ ಬರುತ್ತಾರೆ. ಈ ದೃಶ್ಯ ನೋಡುಗರ ಕಣ್ಮನವನ್ನು ಸೆಳೆಯುತ್ತದೆ.

ಅಂಬಲಿ ಬಂಡಿಗಳ ವೈಭವ : ಸೋಮವಾರ(16.3.2026) ಬೆಳಿಗ್ಗೆ ಬಸವೇಶ್ವರ ಹಾಗೂ ಕಲ್ಮೇಶ್ವರ ದೇವಸ್ಥಾನದಲ್ಲಿ ಅಭಿಷೇಕ ಪೂಜೆಯು ನೆರವೇರುತ್ತದೆ. ಈ ಪವಿತ್ರ ಕಾರ್ಯವನ್ನು ಹಕ್ಕುದಾರರಲ್ಲಿ ಒಬ್ಬರಾದ ಕುಲಕರ್ಣಿಯವರು ನೆರವೇರಿಸುತ್ತಾರೆ. ಎಲ್ಲ ಬಂಡಿಗಳನ್ನು ತೆಂಗಿನ ಗರಿಗಳು, ಮಾಡಿಗರಿಗಳು ಹಾಗೂ ವಿವಿಧ ಬಾವುಟಗಳಿಂದ ಅತ್ಯಂತ ಆಕರ್ಷಕವಾಗಿ ಶೃಂಗರಿಸಲಾಗಿರುತ್ತದೆ. ಅಷ್ಟೇ ಅಲ್ಲದೆ ಬಂಡಿಯಲ್ಲಿ ಅಂಬಲಿ, ಗುಗ್ಗರಿಯನ್ನಿಟ್ಟುಕೊಂಡು ಸಿದ್ಧಪಡಿಸಲಾಗಿರುತ್ತದೆ. ತದನಂತರದಲ್ಲಿ ಅಂಬಲಿ ಬಂಡಿಗಳನ್ನು ಬಸವನ ದೇವಾಲಯಕ್ಕೆ ಪ್ರದಕ್ಷಿಣೆಹಾಕಿ ನಂತರ ಪ್ರಸಾದವನ್ನು ಹಂಚುತ್ತಾರೆ. ಅಲ್ಲಿಂದ ಊರ ಪಕ್ಕದಲ್ಲಿರುವ ಗದ್ದೆಯಲ್ಲಿ ಬಂಡಿಗಳನ್ನು ಸ್ಪರ್ಧಾತ್ಮಕವಾಗಿ ಓಡಿಸಿ ರೈತರು ತಮ್ಮ ತಮ್ಮ ಹೋರಿಗಳ, ಎತ್ತುಗಳ ಸಾಮರ್ಥ್ಯವನ್ನು ಕಂಡು ಮೇರೆ ಮೀರಿದ ಹರ್ಷದಿಂದ ಕುಣಿದಾಡುವವ ವೈಭವ ರೋಮಾಂಚನಗೊಳಿಸುತ್ತದೆ.
ಕಿಚ್ಚಿನ ಸಂಭ್ರಮ : ಅಸಂಖ್ಯ ಭಕ್ತಗಣರಿಂದ ಮಂಗಳವಾರ(17.3.2026)‘ಕಲ್ಮೇಶ್ವರ’ ಹಾಗೂ ‘ಬಸವೇಶ್ವರ’ ದೇವರ ಕಿಚ್ಚನ್ನು ಆಯೋಜಿಸಲಾಗಿದ್ದು. ಊರಿನ ಗೌಡರು ಟೆಂಗಿನಶ್ರೀಫಲವನ್ನು ‘ಕಿಚ್ಚ’ನಲ್ಲಿ ಉರುಳಿಸಿ ಕಿಚ್ಚಿನ ಪ್ರವೇಶಕ್ಕೆ ಚಾಲನೆ ನೀಡಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮಗಳು : ಬುಧವಾರ (18.3.2026) ಬಯಲು ಕುಸ್ತಿಗಳು, ಗುರುವಾರ(19.3.2026) ರಂದು ಯುಗಾದಿ ಪಾಡ್ಯೆ ಜಾತ್ರೆಯ ಕೊನೆಯ ದಿನ. ಸಂಜೆ ಪಂಚಾAಗ ಪಠಣ, ನಂತರ ಬಾಲಶಿವಾಜಿ ಮೇಳಾ ತಂಡದಿAದ ಲಾಠಿ ಪ್ರದರ್ಶನ ಹಾಗೂ ರಾತ್ರಿ ವಿವಿಧ ಮನರಂಜನಾ ಕಾರ್ಯಕ್ರಮಗಳ ಜೊತೆಗೆ ರಂಗುರAಗಿನ ಮದ್ದುಗಳನ್ನು ಸಿಡಿಸಲಾಗುತ್ತದೆ ಎಂದು ದೇವಸ್ಥಾನ ಉತ್ಸವ ಸಮಿತಿ ತಿಳಿಸಿದೆ.

Tags:

error: Content is protected !!