ರಸ್ತೆ ಬದಿ ಹೋಗುತ್ತಿದ್ದ ಜನರ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ, 15 ಜನ ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಕಳೆದ ಗುರುವಾರ ಸಂಜೆ ನಡೆದಿದೆ.

ವೈ- ರಸ್ತೆ ಮೇಲೆ ಹೊರಟಿದ್ದವರ ಮೇಲೆ ಏಕಾಏಕಿ ಹೆಜ್ಜೇನು ದಾಳಿ ಮಾಡಿವೆ. ಇದರಿಂದ ಬೈಕ್ ಮೇಲೆ ಹೊರಟಿದ್ದ ಸವಾರರು ಮತ್ತು ಸಾರ್ವಜನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುಗಳನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. 15 ಜನರ ಪೈಕಿ 8 ಜನ ಚಿಕಿತ್ಸೆ ಪಡೆದು ವಾಪಸ್ ಆಗಿದ್ದು, ಹೆಚ್ಚಿಗೆ ಗಾಯಗೊಂಡವರಿಗೆ ಜಿಲ್ಲಾಸ್ಪತ್ರೆಯಲ್ಲಿ ಇನ್ನೂ ಚಿಕಿತ್ಸೆ ಮುಂದುವರೆದಿದೆ.
