ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ರಾಮಮಂದಿರ ಸಮೀಪದ ಮಲಪ್ರಭಾ ನದಿಯಲ್ಲಿ ಅಂದಾಜು 25 ರಿಂದ 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಈ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ತಕ್ಷಣ ಪೊಲೀಸರನ್ನು ಸಂಪರ್ಕಿಸಲು ವಿನಂತಿಸಲಾಗಿದೆ.
ಖಾನಾಪುರ ಪಟ್ಟಣದ ಮಲಪ್ರಭಾ ನದಿ ಸೇತುವೆ ಬಳಿ ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಧಾವಿಸಿದ ಖಾನಾಪುರ ಪೊಲೀಸರು ಮೃತದೇಹವನ್ನು ಹೊರತೆಗೆದು ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಈ ಘಟನೆಗೆ ಸಂಬಂಧಿಸಿದಂತೆ ಯುಡಿಆರ್ ಪ್ರಕರಣ ದಾಖಲಾಗಿದ್ದು, ಮೃತನ ಗುರುತು ಇನ್ನು ಪತ್ತೆಯಾಗಿಲ್ಲ. ಸುಮಾರು 25 ರಿಂದ 30 ವರ್ಷ ಪ್ರಾಯದ ಈ ಯುವಕನ ಬಗ್ಗೆ ಯಾರಿಗಾದರೂ ಸುಳಿವು ಸಿಕ್ಕಲ್ಲಿ ತಕ್ಷಣ 083336-222333, 9480804033 ಅಥವಾ 9480804086 ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಕೋರಿದೆ.
