State

ಬೆಳಗಾವಿಗೆ ಬಜೆಟ್ ಬಂಪರ್: ಸುವರ್ಣಸೌಧದ ನಗರಿಗೆ ಕೈಗಾರಿಕಾ ಪಾರ್ಕ್, ಕುಸ್ತಿ ಅಖಾಡ ಹಾಗೂ ನೀರಾವರಿ ಯೋಜನೆಗಳ ಮಹಾಪೂರ!

Share

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇವತ್ತು ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಿದ್ದಾರೆ. 2025-26ನೇ ಸಾಲಿನ ಬಜೆಟ್‌ ಮಂಡಿಸಿರುವ ಸಿದ್ದರಾಮಯ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ಅದರಲ್ಲೂ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮೀ ಯೋಜನೆಗಾಗಿ ಬರೋಬ್ಬರಿ 28,608 ಕೋಟಿ ರೂಪಾಯಿಯನ್ನ ತಮ್ಮ ಬಜೆಟ್‌ನಲ್ಲಿ ಸಿದ್ದರಾಮಯ್ಯ ಮೀಸಲಿಟ್ಟಿದ್ದಾರೆ.ರಾಜ್ಯ ಬಜೆಟ್‌ನಲ್ಲಿ ಕುಂದಾನಗರಿ ಬೆಳಗಾವಿಗೆ ಅಭಿವೃದ್ಧಿಯ ಹೊಸ ಪರ್ವ ಆರಂಭವಾಗಿದೆ. ಜಿಲ್ಲೆಯ ಕೈಗಾರಿಕೆ, ನೀರಾವರಿ ಮತ್ತು ಕ್ರೀಡಾ ಕ್ಷೇತ್ರಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ ಅನುದಾನ ಘೋಷಿಸಿದ್ದು, ಗಡಿ ಜಿಲ್ಲೆಯ ಸಮಗ್ರ ವಿಕಾಸಕ್ಕೆ ನಾಂದಿ ಹಾಡಿದೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

ಗಡಿ ಜಿಲ್ಲೆ ಬೆಳಗಾವಿಯ ಸರ್ವತೋಮುಖ ಅಭಿವೃದ್ಧಿಗೆ ಈ ಬಾರಿಯ ಬಜೆಟ್‌ನಲ್ಲಿ ಸಿಂಹಪಾಲು ನೀಡಲಾಗಿದೆ. ಪ್ರಮುಖವಾಗಿ ಬೆಳಗಾವಿ ಜಿಲ್ಲೆಯ ಸುಮಾರು 1,000 ಎಕರೆ ಪ್ರದೇಶದಲ್ಲಿ ಬೃಹತ್ ಕೈಗಾರಿಕಾ ಪಾರ್ಕ್ ಸ್ಥಾಪಿಸಲು ನಿರ್ಧರಿಸಲಾಗಿದ್ದು, ಇದು ಸಾವಿರಾರು ಸ್ಥಳೀಯ ಯುವಕರಿಗೆ ಉದ್ಯೋಗ ನೀಡುವ ಆಶಾಕಿರಣವಾಗಿದೆ. ಜಿಲ್ಲೆಯ ಜೀವನಾಡಿಯಾದ ಮಹಾದಾಯಿ ಕಳಸಾ-ಬಂಡೂರಾ ನಾಲಾ ಯೋಜನೆಗೆ ಸಂಬಂಧಿಸಿದಂತೆ, ಕೇಂದ್ರದ ಅರಣ್ಯ ಇಲಾಖೆಯಿಂದ ಅನುಮತಿ ಸಿಕ್ಕ ತಕ್ಷಣವೇ ಕಾಮಗಾರಿ ಆರಂಭಿಸುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಜೊತೆಗೆ ಬೆಳಗಾವಿಯ ಸುವರ್ಣಸೌಧಕ್ಕೆ ನಿಯೋಜನೆಯಾಗುವ ಸಿಬ್ಬಂದಿಗಳಿಗಾಗಿ 20 ಕೋಟಿ ರೂಪಾಯಿ ವೆಚ್ಚದಲ್ಲಿ ಶಾಶ್ವತ ಬ್ಯಾರಕ್ ನಿರ್ಮಾಣ ಮತ್ತು ಯರಗಟ್ಟಿಯಲ್ಲಿ ನೂತನ ಪೊಲೀಸ್ ಠಾಣೆ ಸ್ಥಾಪನೆಗೆ ಅನುಮೋದನೆ ಸಿಕ್ಕಿದೆ.

ಕ್ರೀಡೆ ಮತ್ತು ಶಿಕ್ಷಣ ಕ್ಷೇತ್ರದಲ್ಲೂ ಬೆಳಗಾವಿ ಜಿಲ್ಲೆ ಮಂಚೂಣಿಯಲ್ಲಿದೆ. ಕುಸ್ತಿ ಪಟುಗಳ ನಾಡು ಬೆಳಗಾವಿಯ ಬೆಳಗುಂದಿಯಲ್ಲಿ ನೂತನ ಕುಸ್ತಿ ಅಖಾಡ ನಿರ್ಮಿಸುವ ಮೂಲಕ ಸ್ಥಳೀಯ ಕ್ರೀಡೆಗೆ ಸರ್ಕಾರ ಬಲ ತುಂಬಿದೆ. ಶಿಕ್ಷಣದ ವಿಚಾರದಲ್ಲಿ, ಬೆಳಗಾವಿ ಗ್ರಾಮಾಂತರ ಮತ್ತು ಬೈಲಹೊಂಗಲದಂತಹ ಭಾಗಗಳಲ್ಲಿ ನೂತನ ಶ್ರಮಿಕ ವಸತಿ ಶಾಲೆಗಳು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ಥಾಪನೆಗೆ ಚಾಲನೆ ನೀಡಲಾಗಿದೆ. ವಿಶೇಷವಾಗಿ ಅಥಣಿ ಭಾಗದಲ್ಲಿ ಕೃಷಿ ಕಾಲೇಜಿನ ಕಾರ್ಯಸಾಧ್ಯತಾ ವರದಿಗೆ ಸೂಚಿಸಲಾಗಿದೆ. ಇನ್ನು ಎಸ್‌ಸಿ-ಎಸ್‌ಟಿ ಉದ್ಯೋಗಸ್ಥ ಮಹಿಳೆಯರಿಗೆ ಬೆಳಗಾವಿಯಲ್ಲಿ ಸುಸಜ್ಜಿತ ವಸತಿ ನಿಲಯಗಳ ಸೌಲಭ್ಯ ದೊರೆಯಲಿದೆ.

ನೀರಾವರಿ ಕ್ಷೇತ್ರದಲ್ಲಿ ಜಿಲ್ಲೆಗೆ ವಿಶೇಷ ಆದ್ಯತೆ ನೀಡಲಾಗಿದ್ದು, ರಾಮದುರ್ಗ, ಸವದತ್ತಿ ಮತ್ತು ಅಥಣಿ ತಾಲೂಕುಗಳ ಕೆರೆ ತುಂಬಿಸುವ ಯೋಜನೆಗಳು ಹಾಗೂ ರೇಣುಕಾ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಬೆಳಗಾವಿಯ ಸಂಕೇಶ್ವರದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ‘ಸಶಕ್ತ ಕರ್ನಾಟಕ’ ಅಭಿವೃದ್ಧಿ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ರಾಷ್ಟ್ರಮಟ್ಟದ ಮ್ಯಾರಾಥಾನ್ ಆಯೋಜಿಸಲು ಅನುದಾನ ನೀಡಲಾಗಿದೆ. ಒಟ್ಟಾರೆಯಾಗಿ ಬೆಳಗಾವಿ ಜಿಲ್ಲೆಯನ್ನು ಕೇವಲ ಆಡಳಿತಾತ್ಮಕ ಕೇಂದ್ರವನ್ನಷ್ಟೇ ಅಲ್ಲದೆ, ಆರ್ಥಿಕ ಮತ್ತು ಶೈಕ್ಷಣಿಕ ಹಬ್ ಆಗಿ ರೂಪಿಸಲು ಈ ಬಜೆಟ್ ಪೂರಕವಾಗಿದೆ.

2026-27ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,432 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ನ್ಯಾಯಾಲಯದಲ್ಲಿರುವ ಒಳಮೀಸಲಾತಿ ಪ್ರಕರಣಗಳಿಂದಾಗಿ ಉದ್ಯೋಗಾಕಾಂಕ್ಷಿಗಳಿಗೆ ಆಗುತ್ತಿರುವ ನಷ್ಟ ಸರಿದೂಗಿಸಲು, ನೇರ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ 5 ವರ್ಷಗಳ ಕಾಲ ಸಡಿಲಿಸಿರುವುದು ಅಭ್ಯರ್ಥಿಗಳಲ್ಲಿ ಸಂಭ್ರಮ ತಂದಿದೆ. ಇದರೊಂದಿಗೆ ಅರಣ್ಯ ಇಲಾಖೆಯ 2,000 ಹುದ್ದೆಗಳ ಭರ್ತಿ ಹಾಗೂ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಸೌಲಭ್ಯವನ್ನೂ ಪ್ರಕಟಿಸಲಾಗಿದೆ.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಿ ಬೆಳಗಾವಿ ಜಿಲ್ಲೆಯ 1,000 ಎಕರೆ ಪ್ರದೇಶದಲ್ಲಿ ಬೃಹತ್ ಕೈಗಾರಿಕಾ ಪಾರ್ಕ್ ಸ್ಥಾಪಿಸುವುದಾಗಿ ಸಿಎಂ ತಿಳಿಸಿದ್ದು, ಮುಂದಿನ 30 ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆಗಳು ಅಧಿಕೃತವಾಗಿ ಚಾಲನೆ ಪಡೆಯಲಿವೆ. ಧಾರವಾಡದ ಪ್ರತಿಭಟನೆಯ ಬೆನ್ನಲ್ಲೇ ಬಂದ ಈ ನಿರ್ಧಾರವು ರಾಜ್ಯದ ನಿರುದ್ಯೋಗಿ ಯುವಜನತೆಗೆ ಸರ್ಕಾರದ ಕಡೆಯಿಂದ ಸಿಕ್ಕ ದೊಡ್ಡ ಕೊಡುಗೆಯಾಗಿದೆ.

Tags:

error: Content is protected !!