ಬೆಳಗಾವಿ ಜಿಲ್ಲೆಯ ರೈತರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಜಿಲ್ಲೆಯ 1158 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಈಗಾಗಲೇ ಹಾರ್ಡ್ವೇರ್ ವಿತರಿಸಲಾಗಿದ್ದು, ಈ ಪೈಕಿ 1004 ಸಂಘಗಳಿಗೆ ಎಂಟರ್‌ಪ್ರೈಸ್ ರಿಸೋರ್ಸ್ ಪ್ಲಾನಿಂಗ್ ತಂತ್ರಾAಶದ ಸೌಲಭ್ಯ ಒದಗಿಸಲಾಗಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಬೆಳಗಾವಿ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಆಧುನೀಕರಣ ಮತ್ತು ಡಿಜಿಟಲೀಕರಣಕ್ಕೆ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಜಿಲ್ಲೆಯ 743 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಈಗ ‘ಸಾಮಾನ್ಯ ಸೇವಾ ಕೇಂದ್ರಗಳಾಗಿ’ ಬದಲಾಗಿದ್ದು, ರೈತರಿಗೆ ಬ್ಯಾಂಕಿAಗ್ ಜೊತೆಗೆ ವಿವಿಧ ಸರ್ಕಾರಿ ಸೇವೆಗಳನ್ನು ಒದಗಿಸುತ್ತಿವೆ. ಸುಗಮ ಹಣ ವರ್ಗಾವಣೆಗಾಗಿ ಬೆಳಗಾವಿ ಡಿ.ಸಿ.ಸಿ ಬ್ಯಾಂಕ್ ಮೂಲಕ ಮೊದಲ ಹಂತದಲ್ಲಿ 100 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಮೈಕ್ರೋ-ಎಟಿಎಂ ಸೌಲಭ್ಯ ನೀಡಲಾಗಿದೆ.
ರೈತರಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಕೃಷಿ ಪರಿಕರಗಳನ್ನು ಒಂದೇ ಸೂರಿನಡಿ ಒದಗಿಸಲು ಜಿಲ್ಲೆಯ 200 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ‘ಕಿಸಾನ್ ಸಮೃದ್ಧಿ ಕೇಂದ್ರ’ಗಳಾಗಿ ಕಾರ್ಯನಿರ್ವಹಿಸುತ್ತಿವೆ. ಬೆಳಗಾವಿ ಜಿಲ್ಲೆಯ 165 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಕೃಷಿ ಮೂಲಸೌಕರ್ಯ ನಿಧಿ ಯೋಜನೆಯಡಿ, ಗೋದಾಮು ಅಥವಾ ಶೇಖರಣಾ ಸೌಲಭ್ಯ ನಿರ್ಮಿಸಲು ಬೆಳಗಾವಿ ಡಿಸಿಸಿ ಬ್ಯಾಂಕ್ ಮೂಲಕ ಸಾಲ ಒದಗಿಸಲಾಗಿದೆ. ಜಿಲ್ಲೆಯ ಎಲ್ಲಾ 1158 ಪಿಕೆಪಿಎಸ್ ಗಳ ಸಿಬ್ಬಂದಿಗೆ ಡಿಜಿಟಲ್ ಅಕೌಂಟಿAಗ್ ಮತ್ತು ಹಣಕಾಸು ಕಾರ್ಯಾಚರಣೆಗಳ ಬಗ್ಗೆ ಈಗಾಗಲೇ ತರಬೇತಿ ನೀಡಿ ಸಜ್ಜುಗೊಳಿಸಲಾಗಿದೆ. ಜಿಲ್ಲೆಯ ಸಹಕಾರಿ ವಲಯವನ್ನು ಡಿಜಿಟಲೀಕರಣಗೊಳಿಸುವ ಮೂಲಕ ರೈತರಿಗೆ ಬ್ಯಾಂಕಿAಗ್ ಮತ್ತು ಕೃಷಿ ಸೇವೆಗಳು ಸ್ಥಳೀಯವಾಗಿಯೇ ಸುಲಭವಾಗಿ ದೊರೆಯುವಂತಾಗಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
