Vijaypura

ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಪ್ರತಿಭಟನೆ

Share

ಗೃಹ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯ ಹಿನ್ನೆಲೆ ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.


ಗೃಹ ಬಳಕೆಯ ಸಿಲಿಂಡರ್ ಬೆಲೆ ಸುಮಾರು ₹1100ಕ್ಕೆ ಏರಿಕೆಯಾಗಿರುವುದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. “ಇಷ್ಟು ಬೆಲೆ ಏರಿಕೆಯಾದರೆ ಬಡ ಜನರು ಹೇಗೆ ಬದುಕಬೇಕು?” ಎಂದು ಪ್ರಶ್ನಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸವಾಲು ಹಾಕಿದರು.
ಪ್ರತಿಭಟನೆಯ ವೇಳೆ ಮಹಿಳಾ ಕಾರ್ಯಕರ್ತರು ಅಂಬೇಡ್ಕರ್ ವೃತ್ತದಲ್ಲೇ ಕಟ್ಟಿಗೆಯ ಮೇಲೆ ಅಡುಗೆ ಮಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ತಕ್ಷಣವೇ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಇಳಿಸಬೇಕು ಎಂದು ಅವರು ಆಗ್ರಹಿಸಿದರು.

Tags:

error: Content is protected !!