Khanapur

ದೆಹಲಿಯಲ್ಲಿ ಕಾಂಗ್ರೆಸ್ ಮಹಿಳಾ ಸಮಾವೇಶ: ರಾಹುಲ್ ಗಾಂಧಿ ಭಾಗಿ, ಡಾ. ಅಂಜಲಿ ನಿಂಬಾಳ್ಕರ್ ಉಪಸ್ಥಿತಿ

Share

ದೆಹಲಿಯ ಇಂದಿರಾ ಭವನದಲ್ಲಿ ಇಂದು ಕಾಂಗ್ರೆಸ್‌ನ ರಾಷ್ಟ್ರೀಯ ಮಹಿಳಾ ಸಮಾವೇಶಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಮಹತ್ವದ ಸಮಾವೇಶದಲ್ಲಿ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದರು.

ನವದೆಹಲಿಯ ಇಂದಿರಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಬಿಸಿ ಕಾಂಗ್ರೆಸ್ ಮಹಿಳಾ ರಾಷ್ಟ್ರೀಯ ಸಮಾವೇಶವನ್ನು ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಉದ್ಘಾಟಿಸಿ, ಮಹಿಳಾ ಸಬಲೀಕರಣ ಮತ್ತು ಒಬಿಸಿ ಸಮುದಾಯದ ಹಕ್ಕುಗಳ ಕುರಿತು ದಿಕ್ಸೂಚಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿಗಳಾದ ಡಾ. ಅಂಜಲಿ ನಿಂಬಾಳ್ಕರ್ ಅವರು ಭಾಗವಹಿಸಿ, ರಾಷ್ಟ್ರಮಟ್ಟದ ನಾಯಕರೊಂದಿಗೆ ವೇದಿಕೆ ಹಂಚಿಕೊಂಡರು. ದೇಶಾದ್ಯಂತ ಆಗಮಿಸಿದ್ದ ಸಾವಿರಾರು ಮಹಿಳಾ ಪ್ರತಿನಿಧಿಗಳ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ರಾಜಕೀಯ ಮತ್ತು ಸಾಮಾಜಿಕವಾಗಿ ಹೆಚ್ಚಿನ ಪ್ರಾತಿನಿಧ್ಯ ನೀಡುವ ಕುರಿತು ಗಂಭೀರ ಚರ್ಚೆಗಳು ನಡೆದವು.

Tags:

error: Content is protected !!