Vijaypura

ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

Share

ವಿಜಯಪುರ ನಗರದ ಮರಾಠಿ ವಿದ್ಯಾಲಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ ಅವರು ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಸುವ‌ ನಿಟ್ಟಿನಲ್ಲಿ ಪರೀಕ್ಷಾ ಮಾರ್ಗಸೂಚಿಯನ್ವಯ ಕಾರ್ಯ ನಿರ್ವವಹಿಸುವಂತೆಯೂ, ಯಾವುದೇ ಸಮಸ್ಯೆ ಬಾರದ ರೀತಿಯಿಂದ ಅತ್ಯಂತ ಜಾಗೃತೆಯಿಂದ ಕಾರ್ಯ‌ನಿರ್ವಹಿಸಿ ಸುಸೂತ್ರ‌ ಪರೀಕ್ಷೆ ನಡೆಯುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗುವಂತರ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭ ಪರೀಕ್ಷಾ ಕೇಂದ್ರದಲ್ಲಿ ಒದಗಿಸಿರುವ ಮೂಲಭೂತ ಸೌಲಭ್ಯ,ಭದ್ರತೆ ಕುಡಿಯುವ ನೀರು,ಅಳವಡಿಸಿರುವ ಸಿಸಿಟಿವಿ ಎಲ್ಲ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದ ಅವರು ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಿ,ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಇರಬೇಕು.ಸಮಯಪಾಲನೆ ಅನುಸರಿಸಿಪರೀಕ್ಷೆಗೆ ನಿಯೋಜಿತ ಅಧಿಕಾರಿ,ಸಿಬ್ಬಂದಿ ವಹಿಸಿರುವ ಜವಾಬ್ದಾರಿ ಅಚ್ಚುಕಟ್ಟಾಗಿ ಬಹು ಎಚ್ಚರಿಕೆಯಿಂದ ನಿಭಾಯಿಸಿ ಎಂದು ಸೂಚನೆ ನೀಡಲಾಯಿತು. ಈ ಸಂದರ್ಭದಲ್ಲಿ ಪರೀಕ್ಷೆಗೆ ನಿಯೋಜಿತ ಅಧಿಕಾರಿ,ಸಿಬ್ಬಂದಿ ಇದ್ದರು.

Tags:

error: Content is protected !!