KHANAPUR

ನವದೆಹಲಿಯಲ್ಲಿ ಗೋವಾ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ

Share

ಖಾನಾಪೂರದ ಮಾಜಿ ಶಾಸಕಿ ಹಾಗೂ ಎಐಸಿಸಿ (AICC) ಕಾರ್ಯದರ್ಶಿಯಾಗಿರುವ ಡಾ. ಅಂಜಲಿ ನಿಂಬಾಳ್ಕರ್ ಅವರು, ನವದೆಹಲಿಯ ಎಐಸಿಸಿ ಕಛೇರಿಯಲ್ಲಿ ಗೋವಾ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಪಕ್ಷದ ಹಿರಿಯ ಮುಖಂಡರೊಂದಿಗೆ ಮಹತ್ವದ ಚರ್ಚೆ ನಡೆಸಿದರು.

ಈ ಸಭೆಯಲ್ಲಿ ಗೋವಾ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವ ಕುರಿತಂತೆ ಕೆಲವು ಪ್ರಮುಖ ಸಲಹೆ-ಸೂಚನೆಗಳನ್ನು ನೀಡಲಾಗಿದ್ದು, ಅವುಗಳನ್ನು ಅನುಷ್ಠಾನಗೊಳಿಸಿ ಪಕ್ಷವನ್ನು ಬಲಪಡಿಸಲು ತಾವು ಸಜ್ಜಾಗಿರುವುದಾಗಿ ಡಾ. ಅಂಜಲಿ ನಿಂಬಾಳ್ಕರ್ ತಿಳಿಸಿದರು. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಸಂಸದ ಸೆಂಥಿಲ್ ಕುಮಾರ್ ಮತ್ತು ವಂಶಿಚಂದ್ ರೆಡ್ಡಿ ಅವರು ಉಪಸ್ಥಿತರಿದ್ದರು

Tags:

error: Content is protected !!