ಕಳೆದ ಒಂದು ವಾರದಿಂದ ವಿಜಯಪುರ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ರೈತರ ತೋಟಗಾರಿಕೆ ಬೆಳೆಗಳಾದ ದಾಳಿಂಬೆ, ದ್ರಾಕ್ಷ ಮತ್ತು ಬಾಳೆ ಸಂಪೂರ್ಣವಾಗಿ ನಾಶವಾಗಿವೆ. ಇದರಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕೂಡಲೇ ಪರಿಹಾರ ನೀಡಬೇಕೆಂದು ಆಗ್ರಹಿಸಿ, ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಕರ್ನಾಟಕ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ, ಮನವಿಯನ್ನು ಸಲ್ಲಿಸಲಾಯಿತು.

ಅಲ್ಲದೇ ಜಿಲ್ಲೆಯ ಕೊಲ್ಲಾರ ತಾಲೂಕಿನ ಮಸೂತಿ ಗ್ರಾಮದಲ್ಲಿ ರೈತನ ಜಮೀನಿನಲ್ಲಿ ಹಾದುಹೋದ ವಿದ್ಯುತ್ ಕಂಬದ ತಂತಿ ತಗುಲಿ ಬೆಂಕಿಗಾಹುತಿಯಾದ ಶ್ರೀಗಂಧದ ಮರ ಹಾಗೂ ಹೆಬ್ಬುಲಿನ ಮರಗಳ ಘಟನೆ ಕುರಿತು ಕರ್ನಾಟಕ ರೈತ ಸಂಘದ ಮುಖಂಡ ಸೋಮನಗೌಡ ಬಿರಾದಾರ್ ಅವರು ಸರ್ಕಾರಕ್ಕೆ ಅಗ್ರಹಿಸಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸರ್ವೇ ಕಾರ್ಯ ಮಾಡಿ, ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.
