ಮದುವೆ ಮಾಡಿಕೊಳ್ಳಲು ನಿರಾಕರಿಸಿದ ಯುವತಿ ಹಾಗೂ ಅವರ ಕುಟುಂಬ ಸದಸ್ಯರ ಮೇಲೆ ಯುವಕನೋರ್ವ ಹಲ್ಲೆ ಮಾಡಿರುವ ಘಟನೆ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದಲ್ಲಿ ನಡೆದಿದೆ.
ವಿದ್ಯಾಶ್ರೀ ಕಿಲ್ಲಾರಿ ಎಂಬ ಯುವತಿ ಹಾಗೂ ಅವರ ಕುಟುಂಬದ ಸದಸ್ಯರ ಮೇಲೆ
ಬೀರಪ್ಪ ರಾಮಪ್ಪ ಕಜ್ಜನ್ನವರ ಎಂಬ ಯುವಕ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ.ಕಣ್ಣಿಗೆ ಖಾರದ ಪುಡಿ ಎರಚಿ ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಿದ್ದಲ್ಲದೆ.ಮನೆಯಲ್ಲಿರುವ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾನೆ.
ಹತ್ತು ಜನರೊಂದಿಗೆ ಆಗಮಿಸಿ ವಿದ್ಯಾಶ್ರೀಯ ತಂದೆ, ತಾಯಿ ಸೇರಿದಂತೆ ಕುಟುಂಬದ ಐದು ಜನ ಸದಸ್ಯರ ಮೇಲೆ ಹಲ್ಲೆ ಮಾಡಲಾಗಿದೆ.
ಕಳೆದ ಎರಡು ವರ್ಷಗಳಿಂದ ವಿದ್ಯಾಶ್ರೀಯನ್ನು ಮದುವೆ ಮಾಡಿಕೊಡುವಂತೆ ದುಂಬಾಲು ಬಿದ್ದಿದ್ದ ಬೀರಪ್ಪನು.ಬೀರಪ್ಪನಿಗೆ ಮಗಳನ್ನು ಕೊಡಲು ಹಿಂದೇಟು ಮಹಾದೇವ ಕಿಲ್ಲಾರಿ.ಈ ಕಾರಣಕ್ಕೆ ಬೀರಪ್ಪನು
ನಿನ್ನೆ ರಾತ್ರಿ ಏಕಾಏಕಿ ಮಹಾದೇವ ಕಿಲ್ಲಾರಿ ಮನೆಗೆ ನುಗ್ಗಿ ರಾಡ್ನಿಂದ ಹಲ್ಲೆ ನಡೆಸಿದ್ದಾನೆ.
ಗಾಯಾಳುಗಳನ್ನು ಚಿಕ್ಕೋಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ.
ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.
