ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ರೈಲ್ವೆ ರಸ್ತೆಯಲ್ಲಿರುವ ಪಂಚರತ್ನ ಹೋಟೆಲ್‌ನಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ. ತಡರಾತ್ರಿ ಹೊತ್ತಿನಲ್ಲಿ ಬೆಂಕಿ ತಗುಲಿದ್ದು, ಹೋಟೆಲ್‌ನಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗಾಹುತಿಯಾಗಿವೆ.


ಬೆಂಕಿ ಹೊತ್ತಿಕೊಂಡ ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ವೇಳೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ. ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
