ಇಂದು ಸಾಯಂಕಾಲ ನಡೆಯಲಿರುವ ಭಾರತ- ನ್ಯೂಜಿಲ್ಯಾಂಡ್ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕಾಗಿ ವಿಜಯಪುರದ ಕ್ರೀಡಾಪಟುಗಳು ಭಾರತ ತಂಡಕ್ಕೆ ಶುಭ ಹಾರೈಸಿದ್ದಾರೆ. 2026ರ ಟಿ20 ವಿಶ್ವಕಪ್ ಪಂದ್ಯದಲ್ಲೂ ಭಾರತ ವಿಜಯಶಾಲಿಯಾಗಲಿ ಎಂದು ಅವರು ಆಶಿಸಿದ್ದಾರೆ. ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗಗಳಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ತೋರುತ್ತಿದ್ದು, ಗೆಲ್ಲುವ ನೆಚ್ಚಿನ ತಂಡವಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಭಾರತ ಗೆಲ್ಲುವುದು ನಿಶ್ಚಿತ ಎಂದು ಕ್ರೀಡಾಪಟುಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

