ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿದ್ದ ಐತಿಹಾಸಿಕ ಹಲ್ಮಿಡಿ ಶಾಸನದ ಪ್ರತಿಕೃತಿ ನಾಪತ್ತೆಯಾಗಿದ್ದು, ಕನ್ನಡ ಪರ ಸಂಘಟನೆಗಳು ಕೆಂಡಾಮಂಡಲವಾಗಿವೆ. ಸರ್ಕಾರದ ಆದೇಶದಂತೆ ಸ್ಥಾಪನೆಯಾಗಿದ್ದ ಶಾಸನ ಮಾಯವಾಗಿರುವುದು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಇಂದು ವಿವಿಧ ಕನ್ನಡ ಸಂಘಟನೆಗಳು ಇದನ್ನ ಖಂಡಿಸಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರು ಪ್ರತಿಭಟನೆಯನ್ನು ನಡೆಸಿದವು.
ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆದು ಹಲ್ಮಿಡಿ ಶಾಸನದ ಪ್ರತಿಕೃತಿಗಳನ್ನು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸ್ಥಾಪಿಸಬೇಕೆಂದು ಆದೇಶವಾಗಿ ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಈ ಶಾಸನವನ್ನು ಹಾಕಲಾಗಿತ್ತು. 2024ರಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಅನಾವರಣವನ್ನು ಮಾಡಿದ್ದರು. ಆದರೇ, ಈಗ ಅದು ಮಾಯವಾಗಿದ್ದು, ಇದು ಸಿಎಂ, ಕನ್ನಡ ಸಾಹಿತ್ಯ ಕನ್ನಡ ಪರಂಪರೆಗೆ ಮಾಡಿದ ಅಪಮಾನವಾಗಿದೆ. ಸಿಎಂ ಕಿವಿಗೆ ಹೋಗುವವ ವರೆಗೂ ಪ್ರತಿಭಟನೆ ನಡೆಸುತ್ತೇವೆ ಎಂದು ಕನ್ನಡ ಕ್ರಿಯಾಶೀಲ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ಹೋರಾಟಗಾರ ಶ್ರೀನಿವಾಸ ತಾಳೂಕರ ಅವರು ಹಲ್ಮಿಡಿ ಶಾಸನದ ಪ್ರತಿಕೃತಿ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಅಭಿಮಾನವಿಲ್ಲ. ಕಳೆದು ಹೋದ ಶಾಸನವನ್ನು ಹುಡುಕುವ ಕಾರ್ಯವನ್ನು ಮಾಡುತ್ತೇವೆ. ಒಂದು ವೇಳೆ ಸಿಗದಿದ್ದರೇ ಎಫ್. ಐ.ಆರ್ ದಾಖಲಿಸಿ ಕಾನೂನು ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದರು.
ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವಿವಿಧ ಕನ್ನಡ ಸಂಘಟನೆಗಳ ಪ್ರತಿಭಟನೆ

