ಧಾರವಾಡದಲ್ಲಿ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆ ಅವಾಂತರ ಸೃಷ್ಟಿಸಿದೆ. ಕೆ.ಸಿ. ಪಾರ್ಕ್ ಬಳಿ ಬೃಹತ್ ಮರ ಉರುಳಿ ಕಾರಿನ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ. ಮಳೆಯ ನಡುವೆಯೂ ಅರಣ್ಯ ಇಲಾಖೆ ಸಿಬ್ಬಂದಿ ಮರ ತೆರವುಗೊಳಿಸುವ ಸಾಹಸ ಮೆರೆದಿದ್ದಾರೆ.
ಕಳೆದ ಮೂರು ದಿನಗಳಿಂದ ಧಾರವಾಡದಲ್ಲಿ ಸಂಜೆ ವೇಳೆ ವರುಣನ ಆರ್ಭಟ ಮುಂದುವರಿದಿದೆ. ಇಂದು ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ನಗರದ ಕೆ.ಸಿ. ಪಾರ್ಕ್ ಬಳಿ ಬೃಹತ್ ಮರವೊಂದು ಧರೆಗುರುಳಿದೆ. ಮರವು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಜಖಂಗೊಂಡಿದೆ. ಘಟನೆಯ ಸಮಯದಲ್ಲಿ ಕಾರಿನಲ್ಲಿ ಯಾರೂ ಇಲ್ಲದ ಕಾರಣ ದೊಡ್ಡ ಮಟ್ಟದ ಪ್ರಾಣಾಪಾಯವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.
ಮಳೆಯ ಅಬ್ಬರದ ನಡುವೆಯೂ

ಅರಣ್ಯ ಇಲಾಖೆಯ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಮರ ತೆರವು ಕಾರ್ಯಾಚರಣೆ ನಡೆಸಿದರು. ಸುರಿಯುವ ಮಳೆಯನ್ನು ಲೆಕ್ಕಿಸದೆ ಸಂಚಾರಕ್ಕೆ ಅಡಚಣೆಯಾಗಿದ್ದ ಮರದ ರೆಂಬೆಗಳನ್ನು ಕತ್ತರಿಸಿ ರಸ್ತೆ ಸುಗಮಗೊಳಿಸಿದರು. ಕಚೇರಿ ಮುಗಿಸಿ ಮನೆಗೆ ಮರಳುತ್ತಿದ್ದ ನೂರಾರು ವಾಹನ ಸವಾರರು ಈ ಮಳೆ ಮತ್ತು ಗಾಳಿಯ ಆರ್ಭಟಕ್ಕೆ ಸಿಲುಕಿ ತೀವ್ರ ಪರದಾಟ ನಡೆಸುವಂತಾಯಿತು
