Accident

ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿ ಚಾಲಕ ದುರ್ಮರಣ

Share

ಬೆಳಗಾವಿಯ ಹಿರೇಬಾಗೇವಾಡಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಮಿಕಲ್ ಸಿಮೆಂಟ್ ಮತ್ತು ಈರುಳ್ಳಿ ಸಾಗಿಸುತ್ತಿದ್ದ ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ, ಲಾರಿ ಚಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಗ್ರಾಮದ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಎರಡು ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಚಾಲಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಕೆಮಿಕಲ್ ಸಿಮೆಂಟ್ ತುಂಬಿದ್ದ ಲಾರಿ ಹಾಗೂ ಈರುಳ್ಳಿ ಸಾಗಿಸುತ್ತಿದ್ದ ಲಾರಿಗಳ ನಡುವೆ ಈ ಅಪಘಾತ ನಡೆದಿದೆ.
ಅಪಘಾತದ ರಭಸ ಎಷ್ಟಿತ್ತೆಂದರೆ, ಲಾರಿಯಲ್ಲಿದ್ದ ಲಕ್ಷಾಂತರ ಮೌಲ್ಯದ ಸುಮಾರು 842 ಚೀಲ ಈರುಳ್ಳಿ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಮಣ್ಣುಪಾಲಾಗಿದೆ. ಕೆಮಿಕಲ್ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಚಾಲಕ ಈ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Tags:

error: Content is protected !!