ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಿಕಟ್ಟಿ ಗ್ರಾಮದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಅತಿ ವಿಜೃಂಭಣೆಯಿಂದ ಆಚರಿಸಲಾಯಿತು.

ಶ್ರಮಿಕ ಅಭಿವೃದ್ಧಿ ಸಂಘ ಹಾಗೂ ಬೆಳಗಾವಿಯ ಜನ ಜಾಗರಣ ಸಂಸ್ಥೆಯ ಮಾರ್ಗದರ್ಶನದಲ್ಲಿ, ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಶಸ್ತಿ ವಿಜೇತ ಸಾಹಿತಿ ಸಿದ್ದಣ್ಣ ಇಟ್ಟನಗಿ, ಶ್ರೀಶೈಲ ಹಂಪಾನಾಯ್ಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಶಾಂತಾ ಹಾಗೂ ಶ್ರೀದೇವಿ ಕಲ್ಮಠ ಉಪಸ್ಥಿತರಿದ್ದರು.
ಇದೇ ವೇಳೆ ಜನ ಜಾಗರಣ ಜಿಲ್ಲಾ ಸಂಯೋಜಕರಾದ ಅಂಥೋನಿ, ಯಶವಂತ, ಸಂಜಯ ಸೇರಿದಂತೆ ಅಂಗನವಾಡಿ ಶಿಕ್ಷಕಿ ಮಾದೇವಿ ಪಾಟೀಲ್, ಕಸ್ತೂರಿ ಕಾಗತಿಮಠ, ಸಂತೋಷ ಸಿದ್ದನವರ ಹಾಗೂ ಗ್ರಾಮದ ನೂರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಸ್ವಸಹಾಯ ಸಂಘದ ಮಹಿಳೆಯರು ಆಕರ್ಷಕ ನೃತ್ಯ ಹಾಗೂ ಗಾಯನದ ಮೂಲಕ ಕಾರ್ಯಕ್ರಮದ ಮೆರಗನ್ನು ಹೆಚ್ಚಿಸಿದರು. ಇದೇ ಸಂದರ್ಭದಲ್ಲಿ ಮಹಿಳೆಯರು ಸ್ವಸಹಾಯ ಸಂಘಗಳಿಂದ ಪಡೆಯುತ್ತಿರುವ ಪ್ರಯೋಜನಗಳ ಕುರಿತು ಮಾಹಿತಿ ಹಂಚಿಕೊಂಡರಲ್ಲದೆ, ತಮ್ಮ ದೈನಂದಿನ ಜೀವನದ ಅನುಭವಗಳನ್ನು ವೇದಿಕೆಯ ಮೇಲೆ ಹಂಚಿಕೊಂಡರು.
