ಇರಾನ್-ಇಸ್ರೇಲ್ ಯುದ್ಧ ಸನ್ನಿವೇಶದಲ್ಲಿ ಸಂಕಷ್ಟದಲ್ಲಿ ಸಿಲುಕಿದ ಎಲ್ಲಾ ಒಂದು ಲಕ್ಷ ಜನರನ್ನು ಹಾಗೂ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸನ್ನದ್ಧವಾಗಿವೆ ಎಂದು ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದರು. ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ಸಚಿವರು ಜಗತ್ತಿನ ಎಲ್ಲೇ ಆಗಲಿ ಕನ್ನಡಿಗರು ಸೇರಿದಂತೆ ಭಾರತೀಯರು ಸಂಕಷ್ಟಕ್ಕೆ ಸಿಲುಕಿದಾಗ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಸುರಕ್ಷಿತವಾಗಿ ಕರೆ ತಂದಿದೆ. ಹಿಂದೆ ಉಕ್ರೇನ್ ಅಲ್ಲಿ ಸಿಲುಕಿದ್ದವರನ್ನು ಮರಳಿ ಕರೆ ತಂದಿದ್ದೇವೆ. ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಗೆ ಕೇಂದ್ರ ಸರ್ಕಾರ ಪ್ರಥಮ ಆದ್ಯತೆ ನೀಡುತ್ತದೆ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ. ಇರಾನ್-ಇಸ್ರೇಲ್ ಯುದ್ಧದ ಭೀಕರತೆಯಿಂದಾಗಿ ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ಸಂಕಷ್ಟ ಎದುರಿಸುತ್ತಿರುವ ಬಗ್ಗೆ ಮಾಹಿತಿಯಿದ್ದು, ಈ ಸಂಬಂಧ ಚರ್ಚೆ ನಡೆಸಿದ್ದು, ಎಲ್ಲಾ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇನ್ನೂ ವಿಜಯಪುರ ದಿಂದ ನಾಲ್ಕು ಜನರು ದುಬೈನಲ್ಲಿ ಸಿಲುಕಿದ್ದಾರೆ. ಅವರನ್ನು ವಾಪಸ್ ಕರೆ ತರುವದಾಗಿ ಸಚಿವರು ಭರವಸೆ ನೀಡಿದರು.

