Vijaypura

ಸ್ತ್ರೀ-ಪುರುಷ ಸಮಾನತೆಯ ತತ್ವವನ್ನು ಸಾರಿ ಮಹಿಳೆಯರಿಗೂ ಸಮಾನ ಹಕ್ಕುಗಳನ್ನು ದೊರಕಿಸಿಕೊಟ್ಟ ಕಾಯಕಯೋಗಿ ಬಸವಣ್ಣನವರದ್ದು ಕ್ರಾಂತಿಕಾರಿ ಕೊಡುಗೆ: ಸಚಿವ ಎಂ.ಬಿ.ಪಾಟೀಲ

Share

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿಜಯಪುರ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಶೈಕ್ಷಣಿಕ ಕಾರ್ಯಾಗಾರ ಹಾಗೂ ಉತ್ತಮ ಶಿಕ್ಷಕ-ಶಿಕ್ಷಕಿಯರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಉದ್ಘಾಟಿಸಿದರು.‌ಈ ಸಂದರ್ಭದಲ್ಲಿ ಮಾತನಾಡಿದ ಅವರು ಸ್ತ್ರೀ-ಪುರುಷ ಸಮಾನತೆಯ ತತ್ವವನ್ನು ಸಾರುತ್ತಾ ಮಹಿಳೆಯರಿಗೂ ಸಮಾನ ಹಕ್ಕುಗಳನ್ನು ದೊರಕಿಸಿಕೊಟ್ಟ ಕಾಯಕಯೋಗಿ ಬಸವಣ್ಣನವರ ಕ್ರಾಂತಿಕಾರಿ ಕೊಡುಗೆಗಳನ್ನು ಭಕ್ತಿಯಿಂದ ಸ್ಮರಿಸಿದರು.

ದೇಶದ ಮೊದಲ ಮಹಿಳಾ ಶಿಕ್ಷಕಿಯಾಗಿ ಹೆಣ್ಣುಮಕ್ಕಳಲ್ಲಿ ಅಕ್ಷರದ ದೀಪ ಬೆಳಗಿಸಿದ ಸಾವಿತ್ರಿಬಾಯಿ ಫುಲೆ ಅವರ ಆದರ್ಶಗಳು ಇಂದಿನ ಶಿಕ್ಷಕ ಸಮುದಾಯಕ್ಕೆ ದಾರಿದೀಪವಾಗಲಿ ಎಂದು ಆಶಿಸಿದರು. ನವದೆಹಲಿಯ ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಷನ್ ಹಾಗೂ ಕರ್ನಾಟಕ ಸಾವಿತ್ರಿಬಾಯಿ ಶಿಕ್ಷಕಿಯರ ಸಂಘದ ಧಾರವಾಡ–ವಿಜಯಪುರ ಜಿಲ್ಲಾ ಘಟಕಗಳ ಸಹಯೋಗದಲ್ಲಿ ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನೂರಾರು ಶಿಕ್ಷಕ-ಶಿಕ್ಷಕಿಯರು ಭಾಗವಹಿಸಿ ಸಮಾರಂಭಕ್ಕೆ ಮೆರುಗು ನೀಡಿದರು.

Tags:

error: Content is protected !!