ಖಾನಾಪುರ ತಾಲೂಕಾ ಪಂಚಾಯತ್ ಆವರಣದಲ್ಲಿ ಇಂದು ಶಾಸಕ ವಿಠ್ಠಲ ಹಲಗೇಕರ ಅವರು ನೂರಾರು ಕಟ್ಟಡ ಕಾರ್ಮಿಕರಿಗೆ ಅಗತ್ಯ ಸುರಕ್ಷತಾ ಕಿಟ್ಗಳನ್ನು ವಿತರಿಸಿದರು. ಕಾರ್ಮಿಕರ ಕ್ಷೇಮಾಭಿವೃದ್ಧಿಯೇ ಸರ್ಕಾರದ ಗುರಿಯಾಗಿದ್ದು, ಅವರ ಶ್ರಮಕ್ಕೆ ಗೌರವ ನೀಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಖಾನಾಪುರ ತಾಲೂಕಿನ ಅಭಿವೃದ್ಧಿಯ ಚಕ್ರಕ್ಕೆ ವೇಗ ನೀಡುವ ಶ್ರಮಜೀವಿಗಳಾದ ಕಟ್ಟಡ ಕಾರ್ಮಿಕರ ಹಿತದೃಷ್ಟಿಯಿಂದ ಇಂದು ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ತಾಲೂಕಾ ಪಂಚಾಯತ್ ಆವರಣದಲ್ಲಿ ನಡೆದ ಈ ಸಮಾರಂಭದಲ್ಲಿ ಶಾಸಕ ವಿಠ್ಠಲ ಹಲಗೇಕರ ಅವರು ಸುಮಾರು 400ಕ್ಕೂ ಹೆಚ್ಚು ಕಾರ್ಮಿಕರಿಗೆ ಕೆಲಸದ ವೇಳೆ ಅತ್ಯಗತ್ಯವಾಗಿ ಬೇಕಾಗುವ ಸುರಕ್ಷತಾ ಕವಚಗಳು ಮತ್ತು ಉಪಕರಣಗಳನ್ನೊಳಗೊಂಡ ಕಿಟ್ಗಳನ್ನು ವಿತರಿಸಿದರು. ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮವು ತಾಲೂಕಿನ ಕಾರ್ಮಿಕ ವರ್ಗದಲ್ಲಿ ಹೊಸ ಭರವಸೆ ಮೂಡಿಸಿದೆ.
ಕಿಟ್ ವಿತರಿಸಿ ಮಾತನಾಡಿದ ಶಾಸಕರು, “ಕಾರ್ಮಿಕರು ಸಮಾಜದ ಬೆನ್ನೆಲುಬಾಗಿದ್ದು, ಅವರ ಶ್ರಮವಿಲ್ಲದೆ ಯಾವುದೇ ಕಟ್ಟಡ ಅಥವಾ ಮೂಲಸೌಕರ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಅವರ ಆರೋಗ್ಯ ಮತ್ತು ಕೆಲಸದ ಅವಧಿಯಲ್ಲಿನ ಸುರಕ್ಷತೆ ನಮಗೆ ಮುಖ್ಯವಾಗಿದೆ,” ಎಂದು ತಿಳಿಸಿದರು. ಸರ್ಕಾರದಿಂದ ಸಿಗುವ ಪ್ರತಿಯೊಂದು ಸೌಲಭ್ಯವನ್ನೂ ತಾಲೂಕಿನ ಪ್ರತಿಯೊಬ್ಬ ಕಾರ್ಮಿಕನಿಗೂ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣ್ಯರು ಭಾಗವಹಿಸಿದ್ದರು.
ಕಾರ್ಮಿಕರ ಸುರಕ್ಷತೆಗೆ ಶಾಸಕರಿಂದ ಕಿಟ್ ವಿತರಣೆ
ಖಾನಾಪುರ ತಾಲೂಕಿನ 400 ಕಾರ್ಮಿಕರಿಗೆ ಸೌಲಭ್ಯ
ಶ್ರಮಜೀವಿಗಳ ಹಿತರಕ್ಷಣೆಗೆ ಶಾಸಕ ಹಲಗೇಕರ ಬದ್ಧ
ತಾ.ಪಂ ಆವರಣದಲ್ಲಿ ನಡೆದ ಅರ್ಥಪೂರ್ಣ ಕಾರ್ಯಕ್ರಮ
