Bagalkot

ಬಾಗಲಕೋಟೆ ಅಭಿವೃದ್ಧಿಗೆ ಉಮೇಶ್ ಮೇಟಿ ಗೆಲ್ಲಿಸಿ: ಕಾಂಗ್ರೆಸ್ ಪರ ರಾಹುಲ್ ಜಾರಕಿಹೊಳಿ ಭರ್ಜರಿ ಪ್ರಚಾರ

Share

ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಯುವ ನಾಯಕ ರಾಹುಲ್ ಜಾರಕಿಹೊಳಿ ಮತಯಾಚನೆ ಮಾಡಿದರು. ಸರ್ಕಾರದ ಗ್ಯಾರೆಂಟಿ ಯೋಜನೆಗಳು ಹಾಗೂ ಮೇಟಿ ಕುಟುಂಬದ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತದಾರರ ವಿಶ್ವಾಸ ಕೋರಿದರು.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಿಮಿತ್ತ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದ ಯುವ ನಾಯಕ ರಾಹುಲ್ ಜಾರಕಿಹೊಳಿ, ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಅಬ್ಬರದ ಭಾಷಣ ಮಾಡಿದರು. ಹಿರಿಯ ನಾಯಕ ಹೆಚ್.ವೈ. ಮೇಟಿ ಅವರಂತೆಯೇ ಉಮೇಶ್ ಮೇಟಿ ಕೂಡ ಸ್ಥಳೀಯ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಜನರ ಅಗತ್ಯಗಳಿಗೆ ತಕ್ಕಂತೆ ಸ್ಪಂದಿಸುವ ಗುಣ ಹೊಂದಿರುವ ಇವರನ್ನು ಗೆಲ್ಲಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಯನ್ನು ಮುಂದುವರಿಸಲು ಸಾರ್ವಜನಿಕರು ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದರು.

ಇದೇ ವೇಳೆ ಸರ್ಕಾರದ ಸಾಧನೆಗಳ ಕುರಿತು ಮಾತನಾಡಿದ ಅವರು, 2023ರಲ್ಲಿ ನೀಡಿದ್ದ ಗ್ಯಾರೆಂಟಿ ಭರವಸೆಗಳನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಶಸ್ವಿಯಾಗಿ ಈಡೇರಿಸಿದೆ. ಜಾತಿ-ಮತ ಭೇದವಿಲ್ಲದೆ ಎಲ್ಲ ವರ್ಗದ ಜನರಿಗೂ ಈ ಯೋಜನೆಗಳ ಪ್ರಯೋಜನ ತಲುಪುತ್ತಿದೆ. ರಾಜ್ಯದಲ್ಲಿ ಇನ್ನೂ ಎರಡು ವರ್ಷಗಳ ಕಾಲ ನಮ್ಮದೇ ಸರ್ಕಾರ ಅಧಿಕಾರದಲ್ಲಿ ಇರಲಿದ್ದು, ಮುಂದಿನ ದಿನಗಳಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ನಿಮ್ಮ ಗ್ರಾಮಗಳಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆಯಬೇಕಾದರೆ ಉಮೇಶ್ ಮೇಟಿ ಅವರನ್ನು ಹೆಚ್ಚಿನ ಬಹುಮತದಿಂದ ಆರಿಸಿ ತರಬೇಕು ಎಂದು ರಾಹುಲ್ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ ನೀಡಿದರು.

Tags:

error: Content is protected !!