arrest

ಮಾರಿಹಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದ ಆರೋಪಿ ಅರೆಸ್ಟ್!

Share

ಬೆಳಗಾವಿಯ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಪೊಲೀಸರು ಬಲೆ ಬೀಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ವ್ಯಕ್ತಿಯ ಮೇಲೆ ದಾಳಿ ನಡೆಸಿರುವ ಪೊಲೀಸರು, ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
ಬೆಳಗಾವಿ ನಗರದ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮುತಗಾ ಗ್ರಾಮದ ಹದ್ದಿಯಲ್ಲಿ ಅಕ್ರಮವಾಗಿ ಮದ್ಯ ಸೇವನೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 28 ರಂದು ಬೆಳಗಾವಿ-ಬಾಗಲಕೋಟೆ ರಸ್ತೆ ಪಕ್ಕದ ಭಾರತ ಪೆಟ್ರೋಲ್ ಪಂಪ್ ಸಮೀಪದ ಖುಲ್ಲಾ ಜಾಗೆಯಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ಭರತ ರತ್ನಾಜಿ ಮುತಗೇಕರ (29) ಎಂಬಾತನ ಮೇಲೆ ಎಎಸ್‌ಐ ಆರ್.ಎಮ್. ತಳವಾರ ಹಾಗೂ ಅವರ ಸಿಬ್ಬಂದಿ ತಂಡ ಮಿಂಚಿನ ದಾಳಿ ನಡೆಸಿದೆ. ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ನಿಷೇಧವಿದ್ದರೂ ನಿಯಮ ಉಲ್ಲಂಘಿಸಿದ ಆರೋಪಿಯ ಬಳಿಯಿದ್ದ ವಿಸ್ಕಿ ಬಾಟಲ್ ಹಾಗೂ ಗ್ಲಾಸ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 25/2026 ರಡಿ, ಅಬಕಾರಿ ಕಾಯ್ದೆ 1965ರ ಕಲಂ 15(A) ಹಾಗೂ 32(3) ರ ಅಡಿಯಲ್ಲಿ ಕೇಸ್ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗಿದೆ. ಸಕಾಲದಲ್ಲಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದ ಎಎಸ್‌ಐ ತಳವಾರ ಮತ್ತು ಅವರ ತಂಡದ ಕಾರ್ಯವೈಖರಿಯನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ನಗರದಲ್ಲಿ ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಇಲಾಖೆ ಎಚ್ಚರಿಸಿದೆ.

Tags:

error: Content is protected !!