BELAGAVI

ಮತದಾರರ ಮ್ಯಾಪಿಂಗ್ ವಿಳಂಬಕ್ಕೆ ಬ್ರೇಕ್: ಅಧಿಕಾರಿಗಳಿಗೆ ಗಡುವು ನೀಡಿದ ಸಚಿವ ಸತೀಶ್ ಜಾರಕಿಹೊಳಿ

Share

ಮತದಾರರ ಮ್ಯಾಪಿಂಗ್ ಮಾಡುವ ಕುರಿತು ಮುಂದಿನ ಭಾನುವಾರ ಮತ್ತೊಂದು ಸಭೆ ಕರೆಯಲಾಗುವುದು. ಅಲ್ಲಿಯವರೆಗೆ ಬಾಕಿ ಉಳಿದ ಮ್ಯಾಪಿಂಗ್ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಶುಕ್ರವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಮ್ಯಾಪಿಂಗ್ ಉಳಿದಿರುವ ಕುರಿತು ಒಂದು ವಾರದಲ್ಲಿ ಪೂರ್ಣಗೊಳಿಸಬಹುದು. ಜಿಲ್ಲೆಯಲ್ಲಿ ಶೇ.75 ರಷ್ಟು ಮ್ಯಾಪಿಂಗ್ ಮಾಡಿ ಚುನಾವಣಾ ಆಯೋಗಕ್ಕೆ ಕಳುಹಿಸಿಕೊಡಿ ಎಂದರು.


ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ದಂಡುಮಂಡಳಿ, ಜೆಎನ್ಎಂಸಿ, ಅರಣ್ಯ ಇಲಾಖೆಯ ವಸತಿ ‌ನಿಲಯ, ಲೋಕೋಪಯೋಗಿ ಇಲಾಖೆಯ ವಸತಿ ನಿಲಯದ ಮತಗಟ್ಟೆಯಲ್ಲಿ ನೊಡೇಲ್ ಅಧಿಕಾರಿಗಳ ನೇಮಕ ಮಾಡಿ ಮ್ಯಾಪಿಂಗ್ ಸಮಸ್ಯೆಯ ಬಗೆಹರಿಸಲು ಸೂಚಿಸಿದ್ದೇನೆ‌ ಎಂದರು.
ಮ್ಯಾಪಿಂಗ್ ವೇಳೆ ಕೆಲವರನ್ನು ಬಿಟ್ಟು ಹೋಗಿದ್ದರೆ ಅದನ್ನು ಪೂರ್ಣಗೊಳಿಸಬೇಕು ಎಂದರು.

ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಮಹಾರಾಷ್ಟ್ರದಿಂದ ಒಂದು ಟಿಎಂಸಿ ನೀರು ಬಿಟ್ಟರೇ ನೀರಿನ‌ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇವೆ ಎಂದರು.
ಜಿಪಂ ಸಿಇಒ ರಾಹುಲ್ ಶಿಂಧೆ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಗ್ರಾಪಂ ವತಿಯಿಂದ ಕುಡಿಯುವ ನೀರಿನ ಟ್ಯಾಂಕರ್ ಮೂಲಕ ಸರಬರಾಜು ಮಾಡಲು ಕ್ರಮ ಜರುಗಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಬೇಸಿಗೆ ಕಾಲ ಇರುವುದರಿಂದ ನಗರದ ಪ್ರಮುಖ ವೃತ್ತಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:

error: Content is protected !!