ಸ್ನೇಹಿತನ ಮದುವೆ ಮುಗಿಸಿಕೊಂಡು ಬೈಕ್‌ನಲ್ಲಿ ಬರುವಾಗ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡದ ಜರ್ಮನ್ ಆಸ್ಪತ್ರೆಯ ಸರ್ಕಲ್ ಬಳಿ ಶನಿವಾರ ಸಂಜೆ ನಡೆದಿದೆ.

ಕಾರು ಹಾಗೂ ಬೈಕ್ ಮಧ್ಯೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು, ಇನ್ನು ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ರಾಣೆಬೆನ್ನೂರು ಮೂಲದ ನಿವಾಸಿ ಬಸವರಾಜ ಕಲ್ಲೆರಪ್ಪನವರ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಇನ್ನು ಸ್ಥಳಕ್ಕೆ ಆಗಮಿಸಿದ ಧಾರವಾಡ ಸಂಚಾರಿ ಪೊಲೀಸರು ಘಟನೆ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.
