ಮಟ್ಕಾ, ಹಾಗೂ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಗಡಿಪಾರು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಹೇಳಿದರು.

ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ಮಟ್ಕಾ, ಜೂಜಾಟ, ಗಾಂಜಾ ಸೇರಿದಂತೆ ವಿವಿಧ ಅಕ್ರಮ ದಂಧೆಗಳಲ್ಲಿ ತೊಡಗಿದ್ದ ಆರೋಪಿಗಳ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಸರ್ಫರಾಜ್ ಶೇಖ್, ವಿನಾಯಕ ಕೊಲ್ಲಾಪುರಿ ಹಾಗೂ ಸಾಗರ ಸಾಲಗುಡೆ. ಇವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದರೂ ಪದೇ ಪದೇ ಎಚ್ಚರಿಕೆ ನೀಡಿದರೂ ಚಟುವಟಿಕೆ ನಿಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ವಿಜಯಪುರ, ಕಾರವಾರ ಹಾಗೂ ಯಾದಗಿರಿ ಜಿಲ್ಲೆಗಳ ವ್ಯಾಪ್ತಿಗೆ 6 ತಿಂಗಳ ಕಾಲ ಗಡಿಪಾರು ಮಾಡಲಾಗಿದೆ ಎಂದರು.
