ವಿಜಯಪುರ ನಗರದಲ್ಲಿ ಐದು ದಿನಗಳ ಕಾಲ ನಡೆಯಲಿರುವ ಮೇ ಸಾಹಿತ್ಯ ಸಮ್ಮೇಳನದ ಪೋಸ್ಟರ್ ಅನ್ನು ಹಿರಿಯ ಪತ್ರಕರ್ತ ಬಸವರಾಜ ಸಂಪಳ್ಳಿ ಅವರು ಬಿಡುಗಡೆಗೊಳಿಸಿದರು. ಏಪ್ರಿಲ್ 10, 11, 12, 13, 14 ವಿಜಯಪುರ ಜಿಲ್ಲೆಯ ದರ್ಬಾರ್ ಕ್ರೀಡಾಂಗಣದಲ್ಲಿ ಈ ಸಮ್ಮೇಳನ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತಿಗಳು, ಕವಿಗಳು ಮತ್ತು ಸಾರ್ವಜನಿಕರು ಭಾಗವಹಿಸುವಂತೆ ಅವರು ಮನವಿ ಮಾಡಿದರು.

