Dharwad

ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಧಾರವಾಡದಲ್ಲಿ ಆಕ್ರೋಶ.

Share

ಒಳಮೀಸಲಾತಿ ಜಾರಿಗಾಗಿ ಆಗ್ರಹಿಸಿ ಧಾರವಾಡದಲ್ಲಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡುವ ಮೂಲಕ ಮಾದಿಗ ಸಮಾಜದವರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಧಾರವಾಡ ಹೊರವಲಯದ ನರೇಂದ್ರ ಬಳಿಯ ಸಾಯಿ ಅರಣ್ಯ ಕಲ್ಯಾಣ ಮಂಟಪ ಮುಭಾಗದಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮಾಯಿಸಿದ ಮಾದಿಗ ಸಮಾಜದ ಮುಖುಂಡರು, ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಹೆದ್ದಾರಿ ತಡೆ ಹಿನ್ನಲೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು, ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಹಾಗೂ ಎಡಿಸಿಯವರು ಮನವಿ ಸ್ವೀಕರಿಸಲು ಆಗಮಿಸಿದರು. ಆದರೆ ಪ್ರತಿಭಟನಾಕಾರರು ಡಿಸಿಯವರು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು. ಇದರಿಂದಾಗಿ ಕೆಲಕಾಲ ಗೊಂದಲ ಸೃಷ್ಟಿಯಾಯಿತು. ಇನ್ನೂ ಪ್ರತಿಭಟನಾಕಾರರು ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಗಳು ವಳ ಮೀಸಲಾತಿ ಜಾರಿ ಮಾಡಲು ಮಿನಾಮೇಷ ಯಾಕೆ ಎನಿಸುತ್ತದೆ..?. ನಮ್ಮ ನ್ಯಾಯಯುತವಾದ ಬೇಡಿಕೆ ಈಡೇರಿಸಲು ಯಾಕೆ ಆಗುತ್ತಿಲ್ಲ ಎಂದು ಕಿಡಿಕಾರಿದರು. ಇನ್ನೂ ಪ್ರತಿಭಟನೆ ಸಮಯ ಮೀರುತ್ತಾ ಹೋಗುವುದನ್ನು ಗಮನಸಿದ ಪೊಲೀಸ್ ಇಲಾಖೆ, ಪ್ರತಿಭಟನಕಾರರನ್ನು ವಶಕ್ಕೆ ಪಡೆದು ಕರೆದೊಯ್ದರು.

Tags:

error: Content is protected !!