Khanapur

ಮಹಿಳೆಯರ ಗೌರವವೇ ಸಮಾಜದ ಪ್ರಗತಿ: ಖಾನಾಪುರದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಸತ್ಕಾರ!

Share

ಮಹಿಳೆಯರು ಸಬಲರಾದಾಗ ಮಾತ್ರ ದೇಶ ಪ್ರಗತಿ ಹೊಂದಲು ಸಾಧ್ಯ. ಖಾನಾಪುರದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸೂರ್ಯಕಾಂತ್ ಕುಲಕರ್ಣಿ ಅವರು ಸರ್ಕಾರದ ಯೋಜನೆಗಳು ಮಹಿಳೆಯರ ಬದುಕಿನಲ್ಲಿ ಹೇಗೆ ಬದಲಾವಣೆ ತಂದಿವೆ ಎಂಬುದನ್ನು ಅಂಕಿ-ಅಂಶಗಳ ಸಮೇತ ವಿವರಿಸಿದರು.

ಖಾನಾಪುರ ತಾಲೂಕಿನ ಶಿವಸ್ಮಾರಕದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆ ಮತ್ತು ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸೂರ್ಯಕಾಂತ್ ಕುಲಕರ್ಣಿ ಅವರು, ನಾರಿಶಕ್ತಿಯ ಗೌರವ ಮತ್ತು ಸಬಲೀಕರಣದ ಅಗತ್ಯವನ್ನು ಒತ್ತಿ ಹೇಳಿದರು. ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗಳು ಕಟ್ಟುನಿಟ್ಟಾಗಿ ಜಾರಿಯಾಗುತ್ತಿದ್ದು, ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 27 ಕಂತುಗಳಲ್ಲಿ ತಾಲೂಕಿನ ಮಹಿಳೆಯರ ಖಾತೆಗೆ ಬರೋಬ್ಬರಿ 350 ಕೋಟಿ ರೂಪಾಯಿ ಜಮೆಯಾಗಿದೆ. ಅಲ್ಲದೆ ಶಕ್ತಿ ಯೋಜನೆಯಿಂದ 53.91 ಕೋಟಿ ರೂ. ಹಾಗೂ ಗೃಹಜ್ಯೋತಿ ಯೋಜನೆಯಿಂದ 57.24 ಕೋಟಿ ರೂ. ಲಾಭವನ್ನು ತಾಲೂಕಿನ ಜನತೆ ಪಡೆದುಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಮುನ್ನೆಲೆಗೆ ಬಂದ ಸಾಧಕ ಮಹಿಳೆಯರನ್ನು ವಿಶೇಷವಾಗಿ ಸತ್ಕರಿಸಲಾಯಿತು. ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳ ಕುರಿತು ಅಂಗನವಾಡಿ ಕಾರ್ಯಕರ್ತೆಯರು ಹೆಚ್ಚಿನ ಜಾಗೃತಿ ಮೂಡಿಸಬೇಕೆಂದು ಕರೆ ನೀಡಿದ ಅವರು, ಮಹಿಳೆಯರ ಸುರಕ್ಷತೆಗಾಗಿ ಆಡಳಿತ ಮಂಡಳಿ ನಿರಂತರವಾಗಿ ಪರಿಶೀಲನೆ ನಡೆಸುತ್ತಿದೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸಿಇಓ ರಮೇಶ್ ಮೇತ್ರಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ತಾಲೂಕಾ ಪಂಚಾಯತ್ ಸಿಇಓ ರಮೇಶ್ ಮೇತ್ರಿ, ಸಿಡಿಪಿಓ ವಿಕ್ರಂ ಕೆ.ಬಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಬಾಬು ಹತ್ತರವಾಡ ಇಸಾಕ್ ಖಾನ್ ಪಠಾಣ್ ವೈಷ್ಣವಿ ಪಾಟೀಲ್, ಸಾವಿತ್ರಿ ಮಾದಾರ, ಗೀತಾ ಅಂಬಡಗಟ್ಟಿ ಸೇರಿದಂತೆ ಅನೇಕ ಗಣ್ಯರು ಹಾಗೂ ಮಹಿಳಾ ಫಲಾನುಭವಿಗಳು ಉಪಸ್ಥಿತರಿದ್ದರು.

Tags:

error: Content is protected !!