ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಹಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಿದ್ದು ಸಂತಸ ತಂದಿದೆ ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರು, ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಜನಪರವಾಗಿದೆ. ಬೆಳಗಾವಿ ಭಾಗದಲ್ಲಿ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದೆ. ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಎಲ್ಲ ಸಮುದಾಯಗಳ ಪರವಾಗಿ ಬಜೆಟ್ ಮಂಡಿಸಿರುವುದು ಅಭಿಮಾನದ ಸಂತಿ ಎಂದು ಶ್ರೀಗಳು ಹೇಳಿದ್ದಾರೆ.
