ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಜನಪರವಾದ ಮತ್ತು ರಾಜ್ಯದ ಅಭಿವೃದ್ಧಿ ಯ ಬಜೆಟ್ ಆಗಿದೆ ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ರಾಜ್ಯದ ಸರ್ವತೋಮುಖ ಅಭಿವೃದ್ಧಿ ಯ ದೃಷ್ಟಿಯಿಂದ ನಾಡಿನ ಜನಪರವಾದ ಈ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆಗೂ ಉತ್ತಮ ಆದ್ಯತೆ ನೀಡಿರುವುದು ಶ್ಲಾಘನೀಯವಾಗಿದೆ. ಸರ್ವರಿಗೂ ಸಮಪಾಲು ಎಂಬಂತೆ ಎಲ್ಲಾ ಕ್ಷೇತ್ರಕ್ಕೂ ಸಿಎಂ ಸಿದ್ದರಾಮಯ್ಯ ಅವರು ಆದ್ಯತೆ ನೀಡಿದ್ದು, ಇದೊಂದು ಉತ್ತಮ ಬಜೆಟ್ ಆಗಿದೆ. ಅಲ್ಲದೇ ಇದೊಂದು ಜನಪರ ಕಾಳಜಿಯ ಬಜೆಟ್ ಆಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
