ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ತೊರವಿ ಗ್ರಾಮದಲ್ಲಿ ಬುಧವಾರ ಲಕ್ಕಮ್ಮದೇವಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು. ಈ ವೇಳೆ ಲಕ್ಕಮ್ಮ ದೇವಿಯ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಹೊತ್ತು ದೇವಸ್ಥಾನಕ್ಕೆ ಐದು ಸುತ್ತು ಪ್ರದಕ್ಷಣೆ ಹಾಕಲಾಯಿತು. ಭಕ್ತಾದಿಗಳು ಬಂಡಾರ ಎಸೆಯುವ ಮೂಲಕ ತಮ್ಮ ಹರಕೆಗಳನ್ನು ತೀರಿಸಿಕೊಂಡರು. ಸಾವಿರಾರು ಭಕ್ತಾದಿಗಳು ಈ ಜಾತ್ರೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

